ಕರ್ನಾಟಕ

karnataka

ಹಿಜಾಬ್​ ಹಾಕಿ ಪರೀಕ್ಷೆ ಬರೆಯಲು ಅನುಮತಿ ನೀಡಿದ ಶಿಕ್ಷಕನ ಅಮಾನತಿಗೆ ಶ್ರೀರಾಮಸೇನೆ ಆಗ್ರಹ

By

Published : Mar 29, 2022, 9:06 PM IST

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಸರ್ಕಾರಿ ಉರ್ದು ಪ್ರೌಢ ಶಾಲೆ ಶಿಕ್ಷಕ ಮಹ್ಮದ್ ಅಲಿ ಅವರು ಹಿಜಾಬ್​ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಕ್ಕೆ ಅವರನ್ನು ಅಮಾನತು ಮಾಡಬೇಕು ಎಂದು ಶ್ರೀರಾಮ ಸೇನೆ ಒತ್ತಾಯಿಸಿ ಶಿಕ್ಷಣಾಧಿಕಾರಿಗೆ ದೂರು ನೀಡಿದೆ.

Hijab Wear student
ಶ್ರೀರಾಮ ಸೇನೆಯಿಂದ ಶಿಕ್ಷಕನ ಅಮಾನತಿಗೆ ಆಗ್ರಹ

ಕಲಬುರಗಿ:ಹೈಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟ ಶಿಕ್ಷಕನ ಅಮಾನತಿಗಾಗಿ ಶ್ರೀರಾಮಸೇನೆ ಆಗ್ರಹಿಸಿದೆ. ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಸರ್ಕಾರಿ ಉರ್ದು ಪ್ರೌಢ ಶಾಲೆ ಶಿಕ್ಷಕ ಮಹ್ಮದ್ ಅಲಿಯವರನ್ನು ಅಮಾನತುಗೊಳಿಸುವಂತೆ ಶ್ರೀರಾಮ ಸೇನೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಶ್ರೀರಾಮ ಸೇನೆಯಿಂದ ಶಿಕ್ಷಕನ ಅಮಾನತಿಗೆ ಆಗ್ರಹ

ಸೋಮವಾರ ನಡೆದ ಮೊದಲ ದಿನದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಶಿಕ್ಷಕ ಅವಕಾಶ ಮಾಡಿಕೊಟ್ಟಿದ್ದಾರೆ ಅಂತ ಶ್ರೀರಾಮಸೇನೆ ಜೇವರ್ಗಿ ತಾಲೂಕಾಧ್ಯಕ್ಷ ನಿಂಗನಗೌಡ ಪಾಟೀಲ್ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ. ಶಿಕ್ಷಕ ಮಹ್ಮದ್ ಅಲಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿಯೂ ಎಚ್ಚರಿಸಿದ್ದಾರೆ.

ಇದನ್ನೂ ಓದಿ:ಕಂಬಳ ಕ್ರೀಡೆ ಉತ್ತೇಜನಕ್ಕೆ ಶೀಘ್ರ ಕ್ರಮ: ಸಚಿವ ನಾರಾಯಣಗೌಡ

ABOUT THE AUTHOR

...view details