ಕಲಬುರಗಿ: ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜೇವರ್ಗಿ ಹತ್ತಿರದ ಗೌನಳ್ಳಿ ಕ್ರಾಸ್ ಬಳಿ ನಡೆದಿದೆ. ತಾಲೂಕಿನ ಹಾಗರಗುಂಡಗಿ ಗ್ರಾಮದ ಸಂಜೀವಕುಮಾರ ವಜಾಪುರ್ (30) ಹಾಗೂ ಟೆಂಪೋ ಟ್ರಾವೆಲರ್ ಚಾಲಕ ಅಪ್ಪರಾಯ ಬಿರಾದಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಿಟಿ ವಾಹನದಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ನಿದ್ರೆ ಮಂಪರಿನಲ್ಲಿದ್ದ ಟಿಟಿ ವಾಹನದ ಚಾಲಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಟೆಂಪೋ ಟ್ರಾವೆಲರ್ ವಾಹನದ ಮುಂಭಾಗ ನಜ್ಜುಗುಜ್ಜಾಗಿದ್ದು, ವಾಹನದಡಿ ಸಿಲುಕಿದ್ದ ಡ್ರೈವರ್ನ ಮೃತದೇಹವನ್ನು ಪೊಲೀಸರು ಹೊರ ತೆಗೆದಿದ್ದಾರೆ.