ಕರ್ನಾಟಕ

karnataka

ETV Bharat / state

ಒಬ್ಬನ ಉಳಿಸೋಕೆ ಹೋಗಿ ಮೂವರು ದುರ್ಮರಣ.. ಬೈಕ್‌ಗೆ ಡಿಕ್ಕಿ ತಪ್ಪಿಸುವ ವೇಳೆ ಕಾರು ಮರಕ್ಕೆ ಗುದ್ದಿತು.. - undefined

ಮುಂದೆ ಬರುತ್ತಿದ್ದ ಬೈಕ್​ಗೆ ಕಾರು ಡಿಕ್ಕಿ ಹೊಡೆಯುವುದ್ದನ್ನು ತಪ್ಪಿಸಲು ಹೋಗಿ ಚಾಲಕ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜೇವರ್ಗಿ ತಾಲೂಕಿನ ಅಲ್ಲಾಪುರ ಗ್ರಾಮದ ಬಳಿ ನಡೆದಿದೆ.

ಕಲಬುರಗಿ

By

Published : Jun 19, 2019, 11:51 PM IST

ಕಲಬುರಗಿ :ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜೇವರ್ಗಿ ತಾಲೂಕಿನ ಅಲ್ಲಾಪುರ ಗ್ರಾಮದ ಬಳಿ ನಡೆದಿದೆ.

ಬನಸಗೌಡ ಪಾಟೀಲ್​ (24), ಗಬಸಾವಳಗಿ ಗ್ರಾಮದ ರಾಮನಗೌಡ ದವಳಗಿ (26) ಹಾಗೂ ಶಾಂತಗೌಡ ಮಾಲಿಪಾಟೀಲ್ (24) ಮೃತ ದುರ್ದೈವಿಗಳು. ಚಾಲಕ ವೇಗವಾಗಿ ಕಾರು ಚಲಾಯಿಸುತ್ತಿದ್ದ ಎನ್ನಲಾಗುತ್ತಿದ್ದು, ಎದುರಿಗೆ ಬಂದ ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details