ಕರ್ನಾಟಕ

karnataka

ETV Bharat / state

ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರ ದರ್ಮರಣ - ಕಲಬುರಗಿ ಅಪಘಾತ ಸುದ್ದಿ

ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣದಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ರಸ್ತೆ ಅಪಘಾತ: ಬೈಕ್ ಸವಾರ ಸಾವು

By

Published : Nov 6, 2019, 12:19 PM IST

ಕಲಬುರಗಿ/ ಬಳ್ಳಾರಿ: ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಾಡಿ ಸಮೀಪದ ಲಕ್ಷ್ಮೀಪುರ ವಾಡಿ ಬಳಿ ನಡೆದಿದೆ.

ಟ್ರ್ಯಾಕ್ಟರ್ ಪಲ್ಟಿ: ಚಾಲಕ ಸಾವು

ಶಿವಲಿಂಗ ‌ಮಂತಟ್ಟಿ ಮೃತ ದುರ್ದೈವಿ. ಚಲಿಸುತ್ತಿದ ಟ್ರ್ಯಾಕ್ಟರ್ ಮಗುಚಿ ಬಿದ್ದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ತೆಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ತೀವ್ರ ರಕ್ತಸ್ರಾವದಿಂದ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದಾನೆ. ಈ ಕುರಿತು ವಾಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿಯಲ್ಲಿ ಅಪಘಾತ: ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಹನುಮಂತ (30) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಹನುಮಂತ ಮೂಲತಃ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಸಾದಾಪುರ ಗ್ರಾಮ ನಿವಾಸಿ. ಜಿಂದಾಲ್ ಕಾರ್ಖಾನೆಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಈತ ಕೆಲಸಕ್ಕೆಂದು ತನ್ನ ಊರಿನಿಂದ ಬೈಕ್​​ನಲ್ಲಿ ತೆರಳುವ ವೇಳೆ ದೇವಿನಗರದ ವಿಕ್ಕಿ ಡಾಬಾ ಬಳಿ ರಸ್ತೆ ಕಾಮಗಾರಿ ನಡೆಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ತಲೆಗೆ ಬಲವಾದ ಏಟು ಬಡಿದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ತೆಕ್ಕಲಕೋಟೆ ಸಿಪಿಐ ಹಸನ್ ಸಾಬ್ ಮತ್ತು ಎಎಸ್ಐ ನಾರಾಯಣಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details