ಕರ್ನಾಟಕ

karnataka

ETV Bharat / state

ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ರೌಡಿ ಶೀಟರ್ ಬರ್ಬರ ಹತ್ಯೆ - ತೆಲೆ ಮೇಲೆ ಕಲ್ಲು ಎತ್ತಿ ಹಾಕಿ ರೌಡಿ ಶೀಟರ್ ಬರ್ಬರ ಹತ್ಯೆ

ಹುಮನಾಬಾದ್ ರಿಂಗ್ ರಸ್ತೆಯ ರಾಮನಗರದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ರೌಡಿ ಶೀಟರ್​ನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.

Rowdy Sheeter Murder In Kalburagi
ರೌಡಿ ಶೀಟರ್ ಬರ್ಬರ ಹತ್ಯೆ

By

Published : Jun 12, 2021, 4:53 PM IST

ಕಲಬುರಗಿ:ತಲೆ ಮೇಲೆ ಕಲ್ಲು ಎತ್ತಿ ಹಾಕಿ ರೌಡಿ ಶೀಟರ್ ನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಮನಾಬಾದ್ ರಿಂಗ್ ರಸ್ತೆಯ ರಾಮನಗರದಲ್ಲಿ ನಡೆದಿದೆ.

ಶ್ರೀಕಾಂತ್ ಬೆಂಗಳೂರೆ ಅಲಿಯಾಸ್ ಶ್ರೀನಿವಾಸ್ (27) ಕೊಲೆಯಾದ ರೌಡಿಶೀಟರ್. ಈತನಿಗೆ ಕಂಠಪೂರ್ತಿ ಕುಡಿಸಿ ಸ್ನೇಹಿತರೇ ಕೊಲೆ ಮಾಡಿದ್ದಾರೆಂದು ಶಂಕಿಸಲಾಗಿದೆ. ಕೊಲೆಯಾದ ಶ್ರೀಕಾಂತ್ ಮೂರು ಕೊಲೆ ಪ್ರಕರಣಗಳಲ್ಲಿ ಜೈಲು ಪಾಲಾಗಿ, ಕಳೆದ ನಾಲ್ಕು ತಿಂಗಳ ಹಿಂದಷ್ಟೆ ಹೊರಬಂದಿದ್ದ. ಕೊಲೆಗೂ ಮುನ್ನ ಪಾರ್ಟಿ ಮಾಡಿದ್ದು, ಶ್ರೀಕಾಂತಗೆ ಮದ್ಯ ಕುಡಿಸಿ ನಂತರ ಮುಖದ ಮೇಲೆ ಕಲ್ಲು ಹಾಕಿ ಕೊಲೆ ಮಾಡಲಾಗಿದೆ.

ಸ್ನೇಹಿತರಾದ ಸಂಜು ಗುತ್ತೇದಾರ ಮತ್ತು ಅಂಬರೀಶ ಗುತ್ತೇದಾರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಅನೈತಿಕ ಸಂಬಂಧ ಹಾಗೂ ಹಣಕಾಸಿನ ವ್ಯವಹಾರದ ಹಿನ್ನಲೆ ಕೊಲೆ ನಡೆದಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಶಂಕೆ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ABOUT THE AUTHOR

...view details