ಕರ್ನಾಟಕ

karnataka

ETV Bharat / state

ಕಾಂಗ್ರೆಸ್‌ ಪಕ್ಷದ ನಾಯಕರಿಂದ ಸಂಕಲ್ಪ ಸಮಾವೇಶ - BJP Janaspawaka samavesha

ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಲಬುರಗಿಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕರು ಸಂಕಲ್ಪ ಸಮಾವೇಶ ಆಯೋಜಿಸಿದ್ದರು.

sankalpa-samavesha-to-be-organized-by-congress-leaders
ಕಾಂಗ್ರೆಸ್‌ ಪಕ್ಷದ ನಾಯಕರಿಂದ ಸಂಕಲ್ಪ ಸಮಾವೇಶ ಆಯೋಜನೆ

By

Published : Jan 14, 2021, 4:30 PM IST

ಕಲಬುರಗಿ: ಬಿಜೆಪಿಯವರು ಜನ ಸೇವಕ ಸಮಾವೇಶ ನಡೆಸಿದ ಬೆನ್ನಲ್ಲೇ ಕಲಬುರಗಿಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕರು ಸಂಕಲ್ಪ ಸಮಾವೇಶ ಆಯೋಜಿಸಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ, ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದೇ ತಿಂಗಳ 18 ರಂದು ನಗರದ ಜೈ ಭವಾನಿ ಸಭಾಂಗಣದಲ್ಲಿ ಸಮಾವೇಶ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಮಾವೇಶದಲ್ಲಿ ಸಿಡಬ್ಲೂಸಿ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಡಾ. ಜಿ. ಪರಮೇಶ್ವರ, ಹೆಚ್. ಕೆ. ಪಾಟೀಲ, ಕೆ. ಹೆಚ್‌. ಮುನಿಯಪ್ಪ, ದಿನೇಶ್‌ ಗುಂಡೂರಾವ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ.

6 ಜಿಲ್ಲಾ ಘಟಕಗಳ ಅಧ್ಯಕ್ಷರು ಭಾಗಿ:

ಸಮಾವೇಶದಲ್ಲಿ ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್​, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಬ್ಲಾಕ್‌ ಕಮಿಟಿ ಅಧ್ಯಕ್ಷರು, ಎಐಸಿಸಿ, ಕೆಪಿಸಿಸಿ ಸದಸ್ಯರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಖಂಡ್ರೆ ತಿಳಿಸಿದ್ದಾರೆ.

ABOUT THE AUTHOR

...view details