ಕಲಬುರಗಿ:ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಆರ್. ಪಾಟೀಲ್ ಅವರು ಡಿ ಕೆ ಶಿವಕುಮಾರ್ ಅವರಿಗೆ ಶುಭ ಕೋರಲು ತೆರಳಿದ್ದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷರು ಅವರ ತೆಲೆ ಮೇಲಿನ ಟೋಪಿ ಬಿಸಾಕಿ ಪಕ್ಕಕ್ಕೆ ತಳ್ಳಿದ ಘಟನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತಂತೆ ಸ್ವತಃ ಮಾಜಿ ಶಾಸಕರೇ ಪ್ರತಿಕ್ರಿಯೆ ನೀಡಿದ್ದಾರೆ.
ನನ್ನ ಜೀವನದಲ್ಲಿ ಯಾವತ್ತು ಇಂತಹ ಘಟನೆ ನಡೆದಿರಲಿಲ್ಲ. ಇಂತಹ ವರ್ತನೆಗೆ ಎಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಆತ್ಮ ಗೌರ ಇದ್ದವರೂ ಯಾರೂ ಇದನ್ನು ಸಹಿಸುವುದಿಲ್ಲ. ನಾನು ಇದನ್ನು ಖಂಡಿಸುತ್ತೇನೆ ಎಂದು ಡಿ ಕೆ ಶಿವಕುಮಾರ್ ವಿರುದ್ಧ ಬಿ ಆರ್ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.