ಕಲಬುರಗಿ: ಕನ್ನಡ ಸಾಹಿತ್ಯ ಲೋಕದ ಮತ್ತೊಂದು ಕೊಂಡಿ ಕಳಚಿದೆ. ನಿನ್ನೆ ಹಿರಿಯ ಕಾದಂಬರಿಗಾರ್ತಿ, ಸಾಹಿತಿ ಗೀತಾ ನಾಗಭೂಷಣ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.
ಇಲ್ಲಿನ ಸ್ವಸ್ತಿಕ್ ನಗರದಲ್ಲಿ ವಾಸವಾಗಿದ್ದ ಗೀತಾ ನಾಗಭೂಷಣ ಅವರಿಗೆ ಭಾನುವಾರ ಸಂಜೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕಲಬುರಗಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಮಾರ್ಚ್ 25, 1942 ರಂದು ಜನಿಸಿದ್ದ ಗೀತಾ ನಾಗಭೂಷಣ ಅವರು ಸಾಹಿತ್ಯ ಕ್ಷೇತ್ರದಲ್ಲಿ ಆಗಾದ ಹೆಸರು ಮಾಡಿದ್ದಾರೆ. ನಾಡೋಜ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆಯಾಗಿದ್ದರು. 2010 ರಲ್ಲಿ ಗದಗ ನಗರದಲ್ಲಿ ನಡೆದ 76ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಸಹ ವಹಿಸಿದ್ದರು.