ಕಲಬುರಗಿ: ಮನೆ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರನ್ನು ಕಳ್ಳತನ ಮಾಡಿದ್ದವನಿಗೆ ಜಿಲ್ಲಾ ನ್ಯಾಯಾಲಯ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಕಾರು ಕಳ್ಳತನ: ಅಪರಾಧಿಗೆ ಒಂದು ವರ್ಷ ಜೈಲು ಶಿಕ್ಷೆ - kalburgi District Court Sentenced to one year in prison to car Theft Convict
ಮನೆ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರನ್ನು ಕಳ್ಳತನ ಮಾಡಿದ್ದವನಿಗೆ ಕಲಬುರಗಿ ಜಿಲ್ಲಾ ನ್ಯಾಯಾಲಯ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕಲಬುರಗಿ ನ್ಯಾಯಾಲಯ
ಉಮೇಶ್ ಮಾಲ್ಪೆ ಶಿಕ್ಷೆಗೆ ಒಳಗಾದ ಅಪರಾಧಿ. 2019 ಫೆಬ್ರವರಿಯಲ್ಲಿ ಶಾಂತಿ ನಗರದಲ್ಲಿರುವ ಮಾಂತೇಶ್ ಎಂಬುವರ ಮನೆ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಅಶೋಕ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಪ್ರಕರಣ ವಿಚಾರಣೆಯನ್ನು ಕೈಗೆತ್ತಿಕೊಂಡ 5ನೇ ಹೆಚ್ಚುವರಿ ಜೆ.ಎಂ.ಎಫ್.ಸಿ ನ್ಯಾಯಾಲಯ ವಾದ ವಿವಾದ ಆಲಿಸಿದ ಬಳಿಕ ಉಮೇಶ್ಗೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.