ಕಲಬುರಗಿ: ಅಫ್ಜಲಪುರ ತಾಲೂಕಿನ ಸುಕ್ಷೇತ್ರ ಘತ್ತರಗಾ ಭಾಗ್ಯವಂತಿ ದೇವಿಯ ಸನ್ನಿಧಿಯಲ್ಲೇ ಮಹಿಳೆಯ ಮೇಲೆ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ.
ದೇವರ ಸನ್ನಿಧಿಯಲ್ಲೇ ದ್ವಿತೀಯ ದರ್ಜೆ ಸಹಾಯಕನಿಂದ ಲೈಂಗಿಕ ಕಿರುಕುಳ?! - ದೇವರ ಸನ್ನಿಧಿಯ್ಲಲೇ ಲೈಂಗಿಕ ಕಿರುಕುಳ..
ಘತ್ತರಗಿಯ ಭಾಗ್ಯವಂತಿ ದೇವಾಲಯದ ದ್ವಿತೀಯ ದರ್ಜೆ ಸಹಾಯಕ(ಎಸ್‌ಡಿಎ) ಸದಾಶಿವ ವಗ್ಗೆ ಎಂಬಾತ, ಅದೇ ದೇವಸ್ಥಾನದಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿ ಮೇಲೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಸದಾಶಿವ ವಗ್ಗೆ
ಘತ್ತರಗಿಯ ಭಾಗ್ಯವಂತಿ ದೇವಾಲಯದ ದ್ವಿತೀಯ ದರ್ಜೆ ಸಹಾಯಕ(ಎಸ್‌ಡಿಎ) ಸದಾಶಿವ ವಗ್ಗೆ ಎಂಬಾತ, ಅದೇ ದೇವಸ್ಥಾನದಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿ ಮೇಲೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ.
ಅಲ್ಲದೆ ಸದಾಶಿವ ವಗ್ಗೆ ಹಾಗೂ ಮಹಿಳೆ ದೇವಾಲದಲ್ಲಿಯೇ ಹೊಡೆದಾಡಿಕೊಂಡಿದ್ದಾರೆ. ಲೈಂಗಿಕ ಕಿರುಕುಳ ಹಾಗೂ ಹೊಡೆದಾಡಿಕೊಂಡ ದೃಶ್ಯ ದೇವಸ್ಥಾನದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಸರಿಯಾದ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.