ಕಲಬುರಗಿ:ನಗರದಲ್ಲಿ ನಡೆಯುತ್ತಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸನ್ಮಾನ ಸಮಾರಂಭಕ್ಕೆ ಆಗಮಿಸಿದ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಮನೆಗೆ ಭೇಟಿ ನೀಡಿದರು.
ಖರ್ಗೆ ನಿವಾಸಕ್ಕೆ ಭೇಟಿ ನೀಡಿದ ಶಾಮನೂರು ಶಿವಶಂಕರಪ್ಪ - Former Minister Shamanoor Sivasankarappa
ಕಲಬುರಗಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸನ್ಮಾನ ಸಮಾರಂಭಕ್ಕೆ ಆಗಮಿಸಿದ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ನಗರದ ಐವನ್ ಏ ಶಾಹಿ ಪ್ರದೇಶದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿದರು.
ನಗರದ ಐವನ್ ಏ ಶಾಹಿ ಪ್ರದೇಶದಲ್ಲಿರುವ ಖರ್ಗೆ ನಿವಾಸಕ್ಕೆ ಭೇಟಿ ನೀಡುವ ಮುಂಚೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ನನ್ನನ್ನು ಊಟಕ್ಕೆ ಆಹ್ವಾನ ನೀಡಿದ್ದರು, ಹಾಗಾಗಿ ಬಂದಿದ್ದೇನೆ ಎಂದು ತಿಳಿಸಿದರು.
ಈ ವೇಳೆ ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತು ಪ್ರತಿಕ್ರಿಯಿಸಿದ ಅವರು, ಆ ವಿಷಯ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದರು. 10 ಜನ ನೂತನ ಶಾಸಕರ ಪ್ರಮಾಣ ವಚನದ ಬಗ್ಗೆ ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು. ಬಳಿಕ ಮಲ್ಲಿಕಾರ್ಜುನ ಖರ್ಗೆ ಜೊತೆ ಭೋಜನ ಸೇವಿಸಿದ ಶಿವಶಂಕರಪ್ಪ, ಅರ್ಧಗಂಟೆಗಳ ಕಾಲ ಚರ್ಚೆ ನಡೆಸಿ, ಅಲ್ಲಿಂದ ನಗರದ ವಿವಿ ಆವರಣದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದತ್ತ ಪಯಣ ಬೆಳೆಸಿದರು.