ಕಲಬುರಗಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಮಕ್ಕಳ ಅನೈತಿಕ ಸಾಗಣೆ ಮತ್ತು ಮಾರಾಟವನ್ನು ತಡೆಗಟ್ಟಲು ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವಂತೆ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಮಕ್ಕಳ ಕಳ್ಳಸಾಗಣೆ ತಡೆಗಟ್ಟಲು ಸಚಿವೆ ಶಶಿಕಲಾ ಜೊಲ್ಲೆ ಕಡಕ್ ಸೂಚನೆ - ಕಲಬುರಗಿ ಸುದ್ದಿ
ಜಿಲ್ಲೆಯಲ್ಲಿ ನಡೆಯುತ್ತಿರುವ ಮಕ್ಕಳ ಅನೈತಿಕ ಸಾಗಣೆ ಮತ್ತು ಮಾರಾಟವನ್ನು ತಡೆಗಟ್ಟಲು ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವಂತೆ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ಮಕ್ಕಳ ಸಾಗಣೆ ಹಾಗೂ ಮಾರಾಟ ಪ್ರಕರಣಗಳನ್ನು ತಡೆಗಟ್ಟುವ ಕ್ರಮ ಕೈಗೊಳ್ಳಲು ಸೂಚಿಸಿದರು. ಮಕ್ಕಳ ಅನೈತಿಕ ಸಾಗಣೆ ತಡೆಗೆ ಯಾವೆಲ್ಲ ಕ್ರಮಕೈಗೊಂಡಿದ್ದೀರಿ ಎಂದು ಸಚಿವರು ಕೇಳಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಸ್ತ್ರೀ ಶಕ್ತಿ ಸಂಘ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಉಪಗ್ರಹ ಆಧಾರಿತ ತರಬೇತಿ ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.
ಕಲಬುರಗಿ ಜಿಲ್ಲೆಯಲ್ಲಿ ವಿಶೇಷವಾಗಿ ಚಿಂಚೋಳಿ ಹಾಗೂ ಯಾದಗಿರಿ ಜಿಲ್ಲೆಗಳಿಂದ ಬಡತನದಿಂದ ಮಹಿಳೆಯರು ಬೇರೆಡೆ ಗುಳೆ ಹೋಗುತ್ತಿದ್ದು, ಇದನ್ನು ಸಹ ತಡೆಯಲು ಮುಂದಾಗಬೇಕು. ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಮೂಲಕ ವಲಸೆ ಹೋಗುವುದನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.