ಕಲಬುರಗಿ: ಈಶಾನ್ಯ ಶಿಕ್ಷಕರ ಮತ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಎಂ.ಎಲ್.ಸಿ ಶಶೀಲ್ ನಮೋಶಿ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಅಕ್ಟೋಬರ್ 07ಕ್ಕೆ ನಾಮಪತ್ರ ಸಲ್ಲಿಸುವುದಾಗಿ ನಮೋಶಿ ತಿಳಿಸಿದ್ದಾರೆ.
ಈಶಾನ್ಯ ಶಿಕ್ಷಕರ ಮತಕ್ಷೇತ್ರ ಚುನಾವಣೆ: ಅ.7ಕ್ಕೆ ಶಶೀಲ್ ನಮೋಶಿ ನಾಮಪತ್ರ ಸಲ್ಲಿಕೆ - ಕಲಬುರಗಿ ನ್ಯೂಸ್
ಈ ಬಾರಿಯ ಈಶಾನ್ಯ ಶಿಕ್ಷಕರ ಮತ ಕ್ಷೇತ್ರದ ಚುನಾವಣೆಯಲ್ಲಿ ಗೆದ್ದು ಬರಲಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, 1996 ರಿಂದ ಮೂರು ಅವಧಿಗೆ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿದ್ದೇನೆ. ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಸೋತಿದ್ದೇನೆ. ಈ ಬಾರಿ ಬಿಜೆಪಿ ಟಿಕೆಟ್ ಕೊಟ್ಟಿರುವುದು ಸಂತಸ ತಂದಿದೆ. ಕಳೆದ ಎರಡು ವರ್ಷಗಳಿಂದ ಕ್ಷೇತ್ರದಲ್ಲಿ ಅಡ್ಡಾಡಿದ್ದೇನೆ. ಶೇ 80ರಷ್ಟು ಶಿಕ್ಷಕರನ್ನು ಖುದ್ದಾಗಿ ಭೇಟಿಯಾಗಿದ್ದೇನೆ. ಶಿಕ್ಷಕರ ಸಮಸ್ಯೆ ಬಗೆಹರಿಸುವ ಕೆಲಸ ಮಾಡಿದ್ದು, ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಬರಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಸಚಿವ ಕೆ.ಎಸ್.ಈಶ್ವರಪ್ಪ, ಸಚಿವೆ ಶಶಿಕಲಾ ಜೊಲ್ಲೆ ಮತ್ತಿತರ ನಾಯಕರು ಉಪಸ್ಥಿತರಿರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.