ಕಲಬುರಗಿ:ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಶ್ರೀರಾಮಮಂದಿರಕ್ಕೆ ಕಲಬುರಗಿಯ ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಶರಣಬಸಪ್ಪ ಅಪ್ಪ ಅವರು 25 ಲಕ್ಷ ರೂಪಾಯಿ ದೇಣಿಗೆ ಘೋಷಿಸಿದ್ದಾರೆ.
ಶ್ರೀರಾಮನ ಭವ್ಯ ಮಂದಿರ ನಿರ್ಮಾಣ ನಿಧಿ ಸಂಗ್ರಹ ರಸೀದಿ ಬಿಡುಗಡೆ ಮಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದೂಗಳ ಆರಾಧ್ಯದೈವ ಶ್ರೀರಾಮನ ಮಂದಿರಕ್ಕೆ ಶರಣಬಸವೇಶ್ವರ ಸಂಸ್ಥಾನದ ವತಿಯಿಂದ 25 ಲಕ್ಷ ರೂಪಾಯಿ ದೇಣಿಗೆ ರೂಪದಲ್ಲಿ ನೀಡುವುದಾಗಿ ತಿಳಿಸಿದ್ದಾರೆ. ಬರುವ 17 ರಿಂದ ಕಲಬುರಗಿ ಜಿಲ್ಲೆಯಾದ್ಯಂತ ವಿಶ್ವಹಿಂದೂ ಪರಿಷತ್ತಿನ 5 ಸಾವಿರ ಜನ ಕಾರ್ಯಕರ್ತರು ಮನೆ- ಮನೆಗೆ ಭೇಟಿ ನೀಡಿ ದೇಣಿಗೆ ಸಂಗ್ರಹಿಸಲಿದ್ದಾರೆ. ಶ್ರೀರಾಮನ ಭಕ್ತರು ತಮ್ಮ ಕೈಲಾದಷ್ಟು ದೇಣಿಗೆ ನೀಡುವ ಮೂಲಕ ಶ್ರೀರಾಮ ಮಂದಿರ ನಿಧಿ ಸಂಗ್ರಹ ಅಭಿಯಾನಕ್ಕೆ ಸಹಕರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.