ಕಲಬುರಗಿ: ಪೌರತ್ವ ಮಸೂದೆ ಜಾರಿ ವಿರೋಧಿಸಿ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಗಲಭೆಗಳ ಹಿಂದೆ ಪಾಕಿಸ್ತಾನದ ಕುತಂತ್ರ ಇದೆ ಎಂದು ಶ್ರೀರಾಮ ಸೇನಾ ರಾಜ್ಯ ಉಪಾಧ್ಯಕ್ಷ ಆಂದೋಲ ಶ್ರೀ ಸಿದ್ದಲಿಂಗ ಶಿವಾಚಾರ್ಯರು ಆರೋಪಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಮಸೂದೆಗೆ ಜಿಲ್ಲೆಯ ಮಠಾಧೀಶರಲ್ಲಿ ಯಾವುದೇ ಬಿನ್ನಾಭಿಪ್ರಾಯವಿಲ್ಲ ಎಂದು ತಿಳಿಸಿದರು. ಸಿಎಬಿ ಮಸೂದೆ ವಿರೋಧಿಸಿ ಕೆಲವೊಂದು ಮತಾಂದ ಸಂಘಟನೆಗಳು ಹಾಗೂ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವಿವಿ ವಿದ್ಯಾರ್ಥಿಗಳು ಅನಾಗರಿಕರ ಅಲ್ಲ, ದೆಹಲಿಯಲ್ಲಿ ಕೆಲ ವಿವಿಯ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿರುವದು ಖಂಡನಿಯ ಎಂದು ಆಕ್ರೋಶ ಹೊರಹಾಕಿದರು.