ಕಲಬುರಗಿ: ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದವರಿಗೆ ನಿಂತ ಸ್ಥಳದಲ್ಲೇ ಗುಂಡಿಕ್ಕಿದರೆ ಮಾತ್ರ ಇಂತಹ ಕೊಲೆ ಪ್ರಕರಣಗಳನ್ನು ತಡೆಯಲು ಸಾಧ್ಯ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ, ಆಂದೋಲ ಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಹಿಂದೂ ಯುವಕನ ಹತ್ಯೆ ಮಾನವ ಸಮಾಜ ತಲೆ ತಗ್ಗಿಸುವಂತಹ ವಿಚಾರ. ಬಿಜೆಪಿ ಸರ್ಕಾರ ಹಿಂದೂ ಕಾರ್ಯಕರ್ತರನ್ನು ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆಂದೋಲ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯೆ ಹಿಂದೂ ಕಾರ್ಯಕರ್ತರು ಬಿಜೆಪಿ ಮೇಲೆ ಇಟ್ಟಿರುವ ನಂಬಿಕೆ ಹುಸಿಯಾಗ್ತಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಾಲ್ಕು ಜನ ಹಿಂದೂ ಕಾರ್ಯಕರ್ತರ ಕೊಲೆ ನಡೆದಿದೆ. ಸರ್ಕಾರ ಏನು ಮಾಡುತ್ತಿದೆ, ಗೃಹ ಸಚಿವರು ಏನು ಮಾಡುತ್ತಿದ್ದಾರೆ ಅನ್ನೋದು ಪ್ರಶ್ನೆಯಾಗಿ ಕಾಡುತ್ತಿದೆ. ರಾಜ್ಯದ ಯಾವ ಭಾಗದಲ್ಲೂ ಹಿಂದೂ ಕಾರ್ಯಕರ್ತರು ಸುರಕ್ಷಿತವಾಗಿಲ್ಲ. ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲು ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕಿದೆ ಎಂದರು.
ಹಿಂದೂಗಳಿಗೆ ಭದ್ರತೆ ಕೊಡಿ:ಬಾಯಿ ಮಾತಿನಿಂದ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳತ್ತೇನೆ ಎಂದು ಹೇಳುವ ಉಡಾಫೆ ಹೇಳಿಕೆ ಬಿಡಿ, ಯಾರ್ಯಾರಿಗೆ ಬೆದರಿಕೆ ಇದೆಯೋ ಅವರಿಗೆ ಸರ್ಕಾರ ಭದ್ರತೆ ಕೊಡಬೇಕು. ಅಲ್ಲದೇ ಎಡಿಜಿಪಿ ಅಲೋಕ್ ಕುಮಾರ್ ಸೂಕ್ಷ್ಮ ಪ್ರದೇಶ ಮಂಗಳೂರಿಗೆ ಭೇಟಿ ಕೊಟ್ಟು ಈ ಕುರಿತು ಸಂಪೂರ್ಣ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಇದನ್ನೂ ಓದಿ:Praveen Nettaru murder: ಸಿಎಂ ಬೊಮ್ಮಾಯಿಗೆ ತನಿಖೆ ಮಾಹಿತಿ ನೀಡಿದ ಡಿಜಿಪಿ ಸೂದ್