ಕಲಬುರಗಿ: ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳನ್ನು ವೀಕ್ಷಣೆ ಮಾಡಿದರು.
ಕಲಬುರಗಿ, ಅಫಜಲಪುರ ಹಾಗೂ ಜೇವರ್ಗಿ ತಾಲೂಕಿನ ನೆರೆ ಪೀಡಿತ ಗ್ರಾಮಗಳನ್ನು ವೀಕ್ಷಣೆ ಮಾಡಿ, ಸ್ಥಳೀಯರ ಸಮಸ್ಯೆಗಳನ್ನು ಕೇಳಿದರು.

ಭೀಮಾ ನದಿ ಪ್ರವಾಹಕ್ಕೆ ತುತ್ತಾಗಿರುವ ಸರಡಗಿ (ಬಿ) ಗ್ರಾಮಕ್ಕೆ ಭೇಟಿ ನೀಡಿದ ಅವರು, ನೆರೆ ಸಂತ್ರಸ್ತರ ಸಂಕಷ್ಟವನ್ನು ಆಲಿಸಿದರು. ನೆರೆಯಿಂದ ಉಂಟಾದ ಬೆಳೆ ಹಾನಿ, ಮನೆ ಹಾನಿ ಬಗ್ಗೆ ಮಾಹಿತಿ ಪಡೆದುಕೊಂಡರು. ಜೊತೆಗೆ ಜೇವರ್ಗಿ ತಾಲೂಕಿನ ಕೂಡಿ ಬ್ರಿಡ್ಜ್ , ಕಟ್ಟಿಸಂಗಾವಿ ಬ್ರಿಡ್ಜ್ ಮತ್ತು ಸರಡಗಿ ಬ್ರಿಡ್ಜ್ ಅನ್ನು ವೀಕ್ಷಣೆ ಮಾಡಿದರು.
ನಿನ್ನೆ ಬೆಳಗ್ಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿದ್ದರಾಮಯ್ಯನವರು, ಬೀದರ್ ಹಾಗೂ ಕಲಬುರಗಿ ಜಿಲ್ಲೆಯ ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿದರು. ಇಂದು ಯಾದಗಿರಿ ಜಿಲ್ಲೆಯ ವೀಕ್ಷಣೆ ಮಾಡುತ್ತಿದ್ದಾರೆ.