ಕಲಬುರಗಿ: ದೇಶಾದ್ಯಂತ ಎದುರಿಸುತ್ತಿರುವ ನಿರುದ್ಯೋಗ ಸಮಸ್ಯೆ ಖಂಡಿಸಿ ಹಾಗೂ ನಿರುದ್ಯೋಗ ನಿವಾರಣೆಗೆ ಒತ್ತಾಯಿಸಿ ಕಲಬುರಗಿಯಲ್ಲಿ ಎಐಡಿವೈಒ ಸಂಘಟನೆ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.
ನಿರುದ್ಯೋಗ ನಿವಾರಣೆಗಾಗಿ ಸಹಿ ಸಂಗ್ರಹ ಅಭಿಯಾನ - ನಿರುದ್ಯೋಗ ಸಮಸ್ಯೆ
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವಂತೆ ಕಲಬುರಗಿಯಲ್ಲಿ ಎಐಡಿವೈಒ ಸಂಘಟನೆ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಮಾಡಲಾಯಿತು.
![ನಿರುದ್ಯೋಗ ನಿವಾರಣೆಗಾಗಿ ಸಹಿ ಸಂಗ್ರಹ ಅಭಿಯಾನ Signature Collection Campaign](https://etvbharatimages.akamaized.net/etvbharat/prod-images/768-512-10610324-thumbnail-3x2-chaiii.jpg)
ಸಹಿ ಸಂಗ್ರಹ ಅಭಿಯಾನ
ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ನಡೆದ ಸಹಿ ಸಂಗ್ರಹ ಅಭಿಯಾನಕ್ಕೆ ಯುವಕರು, ವಿದ್ಯಾರ್ಥಿಗಳು ಸಹಿ ಹಾಕುವ ಮೂಲಕ ಬೆಂಬಲ ಸೂಚಿಸಿದರು.
ನಿರುದ್ಯೋಗ ನಿವಾರಣೆಗಾಗಿ ಸಹಿ ಸಂಗ್ರಹ ಅಭಿಯಾನ
ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಕೊರೊನಾ ಲಾಕ್ಡೌನ್ ನಂತರವಂತು ಕೋಟ್ಯಂತರ ಜನ ನಿರುದ್ಯೋಗಿಗಳಾಗಿದ್ದಾರೆ. ಜೀವನ ನಿರ್ವಹಣೆಗೆ ಸಮಸ್ಯೆ ಎದುರಿಸುತ್ತಿದ್ದಾರೆ. ಕೂಡಲೇ ನಿರುದ್ಯೋಗ ನಿವಾರಣೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಹಾಗೂ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವಂತೆ ಸಹಿ ಸಂಗ್ರಹದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಮಾಡಲಾಯಿತು.