ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನ - undefined

ಕಲಬುರಗಿಯಲ್ಲಿ ಔರಾದ್ಕರ್​​ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.

ಕಲಬುರ್ಗಿಯಲ್ಲಿ ಸಹಿ ಸಂಗ್ರಹ ಅಭಿಯಾನ

By

Published : Jul 6, 2019, 4:58 PM IST

ಕಲಬುರಗಿ: ಔರಾದ್ಕರ್​ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ನಗರದ ಸರ್ದಾರ್ ವಲ್ಲಭಭಾಯ್​ ಪಟೇಲ್ ವೃತ್ತದಲ್ಲಿ ಆರಂಭಿಸಿದ ಸಹಿ ಅಭಿಯಾನಕ್ಕೆ ವಿವಿಧ ಮಠಾಧೀಶರು ಚಾಲನೆ ನೀಡಿದರು.

ಸಹಿ ಸಂಗ್ರಹ ಅಭಿಯಾನ

ಕಾನೂನು-ಸುವ್ಯವಸ್ಥೆ ಕಾಪಾಡಲು ಪೊಲೀಸರು ಎಲ್ಲವನ್ನು ತ್ಯಜಿಸಿ ಹಗಲಿರುಳೆನ್ನದೆ ಶ್ರಮಿಸುತ್ತಾರೆ. ಆದರೆ ಅವರ ಕಷ್ಟ-ಕಾರ್ಪಣ್ಯ ಕೇಳುವವರೇ ಇಲ್ಲದಂತಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರಿಗೆ ನ್ಯಾಯಬದ್ಧ ಪ್ರಯೋಜನ ಮತ್ತು ಸೌಲಭ್ಯಗಳು ಸಿಗಬೇಕೆಂದರೆ ಔರಾದ್ಕರ್​​ ವರದಿಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಲಾಯಿತು.

ಔರಾದ್ಕರ್​​ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ 15 ದಿನಗಳ ಗಡುವು ನೀಡಿರುವ ಸಮಿತಿ, ತದನಂತರದಲ್ಲಿ ಬೆಂಗಳೂರಿನಲ್ಲಿ ಗೃಹ ಸಚಿವರ ನಿವಾಸದ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದೆ.

For All Latest Updates

TAGGED:

ABOUT THE AUTHOR

...view details