ಕಲಬುರಗಿ:ಎಸ್‌ಎಫ್‌ಐ ವತಿಯಿಂದ ಕಲಬುರಗಿಯ ವೀರಶೈವ ಕಲ್ಯಾಣ ಮಂಟಪದಲ್ಲಿ ರಾಜ್ಯ ಮಟ್ಟದ ಅಧ್ಯಯನ ಶಿಬಿರ ಆಯೋಜಿಸಲಾಗಿದ್ದು, ಎಸ್‌ಎಫ್ಐ ಅಖಿಲ ಭಾರತ ಅಧ್ಯಕ್ಷ ವಿ ಪಿ ಸಾನು ಚಾಲನೆ ನೀಡಿದರು.
ರಾಜ್ಯ ಮಟ್ಟದ ಅಧ್ಯಯನ ಶಿಬಿರ.. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆಯವಂತೆ ಆಗ್ರಹ.. - ಎಸ್.ಎಫ್.ಐ ಅಖಿಲ ಭಾರತ ಅಧ್ಯಕ್ಷ
ಎಸ್‌ಎಫ್‌ಐ ವತಿಯಿಂದ ಕಲಬುರಗಿಯ ವೀರಶೈವ ಕಲ್ಯಾಣ ಮಂಟಪದಲ್ಲಿ ರಾಜ್ಯ ಮಟ್ಟದ ಅಧ್ಯಯನ ಶಿಬಿರ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಎಸ್‌ಎಫ್‌ಐ ಅಖಿಲ ಭಾರತ ಅಧ್ಯಕ್ಷ ವಿ ಪಿ ಸಾನು ಅಪಾಯಕಾರಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆಯುವಂತೆ ಆಗ್ರಹಿಸಿದರು.
ರಾಜ್ಯ ಮಟ್ಟದ ಅಧ್ಯಯನ ಶಿಬಿರ
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವಿ ಪಿ ಸಾನು, ಅಪಾಯಕಾರಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆಯವಂತೆ ಆಗ್ರಹಿಸಿದರು. ಜೊತೆಗೆ, ವಿದ್ಯಾರ್ಥಿಗಳ ಐಕ್ಯತೆಗಾಗಿ ಹಾಗೂ ಉಜ್ವಲ ಭವಿಷ್ಯಕ್ಕಾಗಿ 371(ಜೆ) ಕಲಂ ಸಮರ್ಪಕ ಜಾರಿಗೆ ತರುವಂತೆ ಶಿಬಿರದಲ್ಲಿ ಒತ್ತಾಯಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಸಿಪಿಐಎಂ ಮುಖಂಡ ಮಾರುತಿ ಮಾನ್ಪಡೆ ವಹಿಸಿಕೊಂಡಿದ್ದರು. ಸಿಪಿಐಎಂ ಜಿಲ್ಲಾ ಸಂಚಾಲಕ ಶರಣಬಸಪ್ಪ ಮಮ್ಮಶೆಟ್ಟಿ ಸೇರಿದಂತೆ ಹಲವು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಶಿಬಿರದಲ್ಲಿ ಭಾಗಿಯಾಗಿದ್ದರು.