ಕರ್ನಾಟಕ

karnataka

By

Published : Mar 4, 2020, 4:59 PM IST

ETV Bharat / state

ಕಲಬುರಗಿಯಲ್ಲಿ ನಿಲ್ಲಿಸಿದ್ದ ಬೈಕ್​​ ಕದ್ದು ಕಳ್ಳ ಪರಾರಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಲಬುರಗಿಯಲ್ಲಿ ನಿಲ್ಲಿಸಿದ್ದ ಬೈಕ್​​ವೊಂದನ್ನು ನೋಡ ನೋಡುತ್ತಿದ್ದಂತೆಯೇ ಖದೀಮನೊಬ್ಬ ಎಗರಿಸಿಕೊಂಡು ಪರಾರಿಯಾಗಿದ್ದಾನೆ.

ಸಿಸಿಟಿವಿಯಲ್ಲಿ ಸೆರೆ
ಸಿಸಿಟಿವಿಯಲ್ಲಿ ಸೆರೆ

ಕಲಬುರಗಿ:ಹಾಡಹಗಲೇ ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳುವು ಮಾಡಿದ ಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದಿದೆ.

ಬಟ್ಟೆ ಅಂಗಡಿ ಮಾಲೀಕ ಭವಾನಿ ಎಂಬುವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಬೈಕ್ ನೋಡಿದಂತೆ ನಟಿಸಿ ಅದರ ಮೇಲೆ ಕುಳಿತು ಸ್ಟಾರ್ಟ್ ಮಾಡಿಕೊಂಡು ನೋಡ ನೋಡುತ್ತಿದ್ದಂತೆಯೇ ಭೂಪ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಬೈಕ್ ಕದಿಯುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬೈಕ್ ಕದ್ದು ಪರಾರಿಯಾಗುತ್ತಿರುವ ದೃಶ್ಯ

ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ABOUT THE AUTHOR

...view details