ಕಲಬುರಗಿ: ಸರ್ಕಾರದ ಪರವಾನಗಿ ಇಲ್ಲದೆ ಕಲಬುರಗಿ ಜಿಲ್ಲೆಯ ಯಡ್ರಾಮಿ ಗ್ರಾಮದಲ್ಲಿ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಒತ್ತವರಿದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶ್ರೀರಾಮ ಸೇನೆ ಗೌರವಾಧ್ಯಕ್ಷ ಹಾಗೂ ಆಂದೋಲ ಕರಣೇಶ್ವರ ಮಠದ ಸಿದ್ಧಲಿಂಗ ಮಹಾಸ್ವಾಮಿ ಆಗ್ರಹಿಸಿದರು.
ಸರ್ಕಾರಿ ಜಮೀನು ಒತ್ತವರಿ ಮಾಡಿಕೊಂಡವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು: ಸಿದ್ಧಲಿಂಗ ಮಹಾಸ್ವಾಮಿ - Siddhalinga Mahaswamy
ಸರ್ಕಾರದ ಪರವಾನಗಿ ಇಲ್ಲದೆ ಕಲಬುರಗಿಯ ಗ್ರಾಮವೊಂದರಲ್ಲಿ ಸರ್ಕಾರಿ ಜಮೀನನ್ನು ಒತ್ತವರಿ ಮಾಡಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕರಣೇಶ್ವರ ಮಠದ ಸಿದ್ಧಲಿಂಗ ಮಹಾಸ್ವಾಮಿ ಆಗ್ರಹಿಸಿದರು.
ಸಿದ್ಧಲಿಂಗ ಮಹಾಸ್ವಾಮಿ
ನಗರದಲ್ಲಿ ಮಾತನಾಡಿದ ಅವರು, ಹಾಲಿ ಶಾಸಕ ಅಜಯಸಿಂಗ್ ಹಾಗೂ ಬೆಂಬಲಿಗರು ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿ ಕಟ್ಟಡಗಳನ್ನು ಕಟ್ಟಿದ್ದಾರೆ. ಯಡ್ರಾಮಿ ಗ್ರಾಮ ಪಂಚಾಯತ್ ಪಿಡಿಒ ಹಾಗೂ ಅಧ್ಯಕ್ಷರು ಅಕ್ರಮವಾಗಿ ಪರಭಾರೆ ಮಾಡಿ ಸರ್ಕಾರಕ್ಕೆ ವಂಚಿಸಿದ್ದಾರೆ ಎಂದು ಆರೋಪಿಸಿದರು.
ಅಧಿಕಾರ ದುರ್ಬಳಕೆ ಮಾಡಿಕೊಂಡ ಗ್ರಾಮ ಪಂಚಾಯತ್ ಅಧ್ಯಕ್ಷ, ಪಿಡಿಒ ಹಾಗೂ ಕಬ್ಜಾ ಮಾಡಿದ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ವಾಮೀಜಿ ಒತ್ತಾಯಿಸಿದರು.