ಕಲಬುರಗಿ:ಶಹಾಬಾದ್-ಶಂಕರವಾಡಿ ಬಳಿಯ ಕಾಗಿಣಾ ನದಿಯ ಮೇಲ್ಸೇತುವೆಯಿಂದ ಜಿಗಿದು ವಿದ್ಯಾರ್ಥಿನಿ ಒಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿಯ ಶವಕ್ಕಾಗಿ ತೀವ್ರ ಶೋಧಕಾರ್ಯ ನಡೆಸಲಾಗುತ್ತಿದೆ. ಚಿತ್ತಾಪೂರ ತಾಲೂಕಿನ ಗುಂಡುಗುರ್ತಿ ಗ್ರಾಮದ ನಿವಾಸಿ ಭಾಗ್ಯಶ್ರೀ (21) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಕಾಗಿಣಾ ನದಿಗೆ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ: ಶವಕ್ಕಾಗಿ ತೀವ್ರ ಶೋಧ
ಬಿಎಸ್ಸಿ ಓದುತ್ತಿದ್ದ ಭಾಗ್ಯಶ್ರೀ ಎಂಬ ವಿದ್ಯಾರ್ಥಿನಿ ಬುಧವಾರ ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಗ್ನಿಶಾಮಕ, ಎನ್ಡಿಆರ್ಎಫ್ ತಂಡ ಶವಕ್ಕಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
ಕಾಗಿಣಾ ನದಿಗೆ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕಲಬುರಗಿ ನಗರದ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಓದುತ್ತಿದ್ದ ಭಾಗ್ಯಶ್ರೀ ಇಂದು ಮಧ್ಯಾಹ್ನದ ಹೊತ್ತಿಗೆ ತನ್ನ ಡಿಯೋ ಬೈಕ್ ಸೇತುವೆ ಮೇಲೆ ನಿಲ್ಲಿಸಿ ನದಿಗೆ ಹಾರಿದ್ದಾರೆ. ಅಗ್ನಿಶಾಮಕ, ಎನ್ಡಿಆರ್ಎಫ್ ತಂಡ ಶವಕ್ಕಾಗಿ ತೀವ್ರ ಶೋಧಕಾರ್ಯ ನಡೆಸುತ್ತಿದ್ದಾರೆ. ಭಾಗ್ಯಶ್ರೀ ತಂದೆ ಬಸವರಾಜ ಪೂಜಾರಿ ಗುಂಡುಗುರ್ತಿ ತಾಲೂಕು ಪಂಚಾಯತಿ ಮಾಜಿ ಸದಸ್ಯರಾಗಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಶಹಾಬಾದ ಪೊಲೀಸರು ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ.
ಇದನ್ನೂ ಓದಿ:ಪರೀಕ್ಷೆಗೆ ಹಾಜರಾಗದೇ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
Last Updated : Jul 20, 2022, 10:03 PM IST