ಕಲಬುರಗಿ:ಹಾಡಹಗಲೇ ಮಾರಕಾಸ್ತ್ರಗಳಿಂದ ಹಲ್ಲೆಗೈದು ವಿದ್ಯಾರ್ಥಿಯ ಕೊಲೆ ಮಾಡಿರುವ ಘಟನೆ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶರಣಬಸವೇಶ್ವರ ಮಹಾವಿದ್ಯಾಲಯದಲ್ಲಿ ಓದುತ್ತಿದ್ದ ಮೊಹಮ್ಮದ್ ಮುದ್ದಸೀರ್ (19) ಮೃತಪಟ್ಟ ಯುವಕ.
ಮಂಗಳವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಕಲಬುರಗಿ ಛೋಟಾ ರೋಜಾ ಬಡಾವಣೆಯ ಬೌವುಲಿಗಲ್ಲಿಯ ಅಮಿರ್ ಗುಲಶನ್ ಫಂಕ್ಷನ್ ಹಾಲ್ ಬಳಿ ದುಷ್ಕರ್ಮಿಗಳು ವಿದ್ಯಾರ್ಥಿ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಪರಾರಿಯಾಗಿದ್ದರು. ಗಾಯಗೊಂಡ ಮುದ್ದಸೀರ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ರಾತ್ರಿ ಮೃತಪಟ್ಟಿದ್ದಾನೆ.