ಕಲಬುರಗಿ: ಮಧ್ಯಪ್ರದೇಶದಿಂದ ಕಲಬುರಗಿಗೆ ನಾಡ ಪಿಸ್ತೂಲ್ ಪೂರೈಕೆ ಆಗಲು ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದ ಆರೋಪಿ ಸೇರಿ ಇಬ್ಬರನ್ನು ಯಡ್ರಾಮಿ ಪೊಲೀಸರು ಬಂಧಿಸಿದ್ದಾರೆ. ಆಳಂದ ತಾಲೂಕಿನ ಝಳಕಿ ಗ್ರಾಮದ ಮಧ್ಯವರ್ತಿ ಸೈಫನ್‌ಸಾಬ್ ಹಾಗೂ ಗುರುಲಿಂಗಪ್ಪ ಎಂಬುವವರೇ ಬಂಧಿತ ಆರೋಪಿಗಳು.
ಆರೋಪಿಗಳಿಂದ ಒಂದು ನಾಡ ಪಿಸ್ತೂಲ್ ಹಾಗೂ ಮೂರು ಜೀವಂತ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ತಲೆ ಮರೆಸಿಕೊಂಡ ಇನ್ನುಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.