ಕರ್ನಾಟಕ

karnataka

ETV Bharat / state

ಹಲ್ಲಿ ಬಿದ್ದಿರುವ ಶಂಕೆ: ಮಧ್ಯಾಹ್ನದ ಬಿಸಿ ಊಟ ಸೇವಿಸಿ ಮಕ್ಕಳು ಅಸ್ವಸ್ಥ

ಕಲಬುರಗಿಯಲ್ಲಿ ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸುಮಾರು 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

Children are sick after eating hot midday meal
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಮಕ್ಕಳು ಅಸ್ವಸ್ಥ

By

Published : Jul 27, 2022, 8:06 PM IST

ಕಲಬುರಗಿ:ಹಲ್ಲಿ ಬಿದ್ದಿರುವ ವಿಷ ಆಹಾರ ಸೇವಿಸಿ 30ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಅಫಜಲಪುರ ತಾಲೂಕಿನ ಹಾವನೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಮಧ್ಯಾಹ್ನದ ಬಿಸಿ ಊಟ ಸೇವಿಸಿ ಮಕ್ಕಳು ಅಸ್ವಸ್ಥ

ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದೆ ಎನ್ನಲಾಗ್ತಿದೆ. ಅದೇ ಆಹಾರವನ್ನು ಮಕ್ಕಳು ಸೇವಿಸಿದ ಪರಿಣಾಮ‌ ಮಕ್ಕಳು ಅಸ್ವಸ್ಥಗೊಂಡಿದ್ದಾರೆಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಆಹಾರ‌ ಸೇವಿಸಿದ ಸ್ವಲ್ವ ಸಮಯದ ನಂತರ ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾರೆ. ಆಗ ತಕ್ಷಣ ಅವರನ್ನು ಗೊಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ.

10 ಕ್ಕೂ ಹೆಚ್ಚು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಮಕ್ಕಳಿಗೆ ಗ್ಲೂಕೋಸ್‌ ಹಾಕಿ ಚಿಕಿತ್ಸೆ ನೀಡಲಾಗುತ್ತಿದೆ. ಅಡುಗೆ ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ಘಟನೆ‌ ನಡೆದಿದೆ. ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಪ್ರವೀಣ್ ಹತ್ಯೆ: ಬೆಳಗಾವಿಯಲ್ಲೂ ಬಿಜೆಪಿ ಮುಖಂಡರಿಂದ ರಾಜೀನಾಮೆ

For All Latest Updates

TAGGED:

ABOUT THE AUTHOR

...view details