ಕಲಬುರಗಿ:ತಳವಾರ ಹಾಗೂ ಪರಿವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಅನಿರ್ದಿಷ್ಟಾವಧಿ ಧರಣಿ ಮುಂದುವರೆದಿದೆ.
ತಳವಾರ, ಪರಿವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡುವಂತೆ ಮುಂದುವರಿದ ಧರಣಿ - ಕಲಬುರಗಿಯಲ್ಲಿ ಪ್ರತಿಭಟನೆ
ತಳವಾರ, ಪರಿವಾರ ಎಸ್ಟಿ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಧರಣಿ ಸತ್ಯಾಗ್ರಹ ಇಂದು 12 ದಿನಕ್ಕೆ ಕಾಲಿಟ್ಟಿದೆ.ತಳವಾರ ಹಾಗೂ ಪರಿವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಈ ಸತ್ಯಾಗ್ರಹ ನಡೆಸಲಾಗುತ್ತಿದೆ.
ಮುಂದುವರಿದ ಧರಣಿ
ಎರಡೂ ಸಮುದಾಯ ಮೀಸಲಾತಿಯಿಂದ ವಂಚಿತವಾಗಿದೆ. ರಾಜ್ಯ ಸರ್ಕಾರದ ಈ ನಿರ್ಲಕ್ಷ್ಯ ದಿಂದ ತಳವಾರ ಪರಿವಾರ ಸಮುದಾಯದ ಯುವಕರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ತೀವ್ರ ಸಮಸ್ಯೆ ಉಂಟಾಗುತ್ತಿದೆ. ಆದ್ದರಿಂದ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ತಳವಾರ ಹಾಗೂ ಪರಿವಾರ ಸಮುದಾಯಗಳಿಗೆ ಎಸ್ಟಿ ಪ್ರಮಾಣ ಪತ್ರ ನೀಡಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ಪಟೇಲ್ ಮಾದರಿಯಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.