ಕಲಬುರಗಿ:ಆಳಂದ ತಾಲೂಕಿನ ವಿವಿಧ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹಿಂದ ಚಿಂತಕರ ವೇದಿಕೆ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದೆ.
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಹಿಂದ ಚಿಂತಕರ ವೇದಿಕೆ ಅನಿರ್ಧಿಷ್ಟಾವಧಿ ಧರಣಿ - ಆಳಂದ ತಾಲೂಕಿನ ವಿವಿಧ ಸಮಸ್ಯೆಗಳನ್ನು ಹೇಳಿಕೊಂಡು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು
ಆಳಂದ ತಾಲೂಕಿನ ವಿವಿಧ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವುದು, ಶುದ್ಧ ನೀರಿನ ವ್ಯವಸ್ಥೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹಿಂದ ಚಿಂತಕರ ವೇದಿಕೆ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದೆ. ಆಳಂದ ಶಾಸಕ ಸುಭಾಷ್ ಗುತ್ತೇದಾರ್ ವಿರುದ್ಧ ಘೋಷಣೆ ಕೂಗಿ, ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಹಿಂದ ಚಿಂತಕರ ವೇದಿಕೆ ಅನಿರ್ಧಿಷ್ಟಾವಧಿ ಧರಣಿ
ಕಲಬುರಗಿಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಹಿಂದ ಚಿಂತಕರ ವೇದಿಕೆ ಅನಿರ್ಧಿಷ್ಟಾವಧಿ ಧರಣಿ
ಆಳಂದ ಶಾಸಕ ಸುಭಾಷ್ ಗುತ್ತೇದಾರ್ ವಿರುದ್ಧ ಘೋಷಣೆ ಕೂಗಿ, ಆಳಂದ ತಾಲೂಕಿನ ವಿವಿಧ ಸಮಸ್ಯೆಗಳನ್ನು ಹೇಳಿಕೊಂಡು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆಬಳಿ, ಬಟ್ಟರ್ಗಾ, ನಿಂಬರ್ಗಾ ಮೊದಲಾದ ಹಳ್ಳಿಗಳಿಗೆ ಸಮರ್ಪಕ ರಸ್ತೆ ಕಲ್ಪಿಸಬೇಕು. ತಾಲೂಕಿನ ಹಲವು ಗ್ರಾಮಗಳಿಗೆ ಕಳಪೆ ಗುಣಮಟ್ಟದ ರಸ್ತೆ ನಿರ್ಮಿಸಲಾಗಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜೊತೆಗೆ, ತಾಲೂಕಿನ ವಿವಿಧ ತಾಂಡಾಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿದರು.