ಕಲಬುರಗಿ: ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ, ಡಿಸಿಎಂ ಗೋವಿಂದ ಕಾರಜೋಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಕಲಬುರಗಿಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಕಾರಜೋಳ - ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ
ಕಲಬುರಗಿ ಜಿಲ್ಲಾ ಉಸ್ತುವಾರಿ ವಹಿಸಿಕೊಂಡು ಒಂದು ತಿಂಗಳ ಬಳಿಕ ಸಚಿವ ಗೋವಿಂದ ಕಾರಜೋಳ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ವಿವಿಧ ಇಲಾಖೆ ಪ್ರಗತಿಪರಿಶೀಲನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ
ವಿವಿಧ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕಾರಜೋಳ
ಸಚಿವರ ಚೊಚ್ಚಲ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆರೊಗ್ಯ, ಸಮಾಜ ಕಲ್ಯಾಣ, ಶಿಕ್ಷಣ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯುವುದರ ಜೊತೆಗೆ ಹಲವು ಇಲಾಖೆಗಳ ಕಾರ್ಯಕ್ಷಮತೆ ಬಗ್ಗೆಯೂ ಚರ್ಚಿಸಿದ್ರು. ಈ ವೇಳೆ ಪ್ರಗತಿ ರಹಿತ ಕಾರ್ಯಕ್ರಮಗಳ ಇಲಾಖೆ ಅಧಿಕಾರಿಗಳಿಗೆ ಅಭಿವೃದ್ಧಿ ಕುರಿತು ಗಮನ ಹರಿಸುವಂತೆ ಸೂಚಿಸಿದರು.
ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಶಾಸಕರು ಉಪಸ್ಥಿತರಿದ್ದರು.