ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿವೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದ ಮಿಜಬಾ ನಗರದಲ್ಲಿ ತಡರಾತ್ರಿ ನಡೆದಿದೆ.
ಕಲಬುರಗಿಯಲ್ಲಿ ಮತ್ತೆ ಹರಿದ ನೆತ್ತರು... ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಬರ್ಬರ ಕೊಲೆ - undefined
ಕಲಬುರಗಿಯಲ್ಲಿ ಮತ್ತೆ ನೆತ್ತರು ಹರಿದಿದೆ. ವ್ಯಕ್ತಿವೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ಬರ್ಬರ ಹತ್ಯೆ
ನಬಿ ಕಾಲೋನಿ ನಿವಾಸಿ ಆಸಿಫ್ ಅಮೇರಹುಸೇನ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮನೆ ಎದುರು ರಸ್ತೆ ನಿರ್ಮಾಣದ ವಿಷಯವಾಗಿ ನಡೆದ ಕಲಹದ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಯಡಾ ಮಾರ್ಟಿನ್ ತಿಳಿಸಿದ್ದಾರೆ.
ಈ ಕುರಿತು ಕಲಬುರಗಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Last Updated : Mar 11, 2019, 1:56 PM IST