ಕಲಬುರಗಿ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ಹಳ್ಳದ ಮೇಲ್ಸೇತುವೆ ಕೊಚ್ಚಿಹೋಗಿದೆ. ಇದರಿಂದ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ತೆರಳಲು ಸಾಧ್ಯವಾಗದೇ ಸಂಕಷ್ಟ ಅನುಭವಿಸಿದ್ದಾರೆ.
ಮಳೆಗೆ ಕೊಚ್ಚಿಹೋದ ಮೇಲ್ಸೇತುವೆ: ವಿದ್ಯಾರ್ಥಿಗಳ ಪರದಾಟ - overpass road
ಜೇವರ್ಗಿ ಪಟ್ಟಣದ ಹೊರವಲಯದಲ್ಲಿ ಮೇಲ್ಸೇತುವೆ ರಸ್ತೆ ಕಳಚಿ ಬಿದ್ದಿದ್ದು, ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ತೆರಳಲು ಸಾಧ್ಯವಾಗದೇ ಸಂಕಷ್ಟ ಅನುಭವಿಸಿದ್ದಾರೆ.
ಮಳೆಗೆ ಕೊಚ್ಚಿಹೋದ ಮೇಲ್ಸೇತುವೆ
ಜೇವರ್ಗಿ ಪಟ್ಟಣದ ಹೊರವಲಯದಲ್ಲಿ ಮೇಲ್ಸೇತುವೆ ರಸ್ತೆ ಕಳಚಿ ಬಿದ್ದಿದ್ದು, ರಸ್ತೆ ಸಂಪರ್ಕ ಕಡಿತವಾಗಿದೆ. ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ತೆರಳಲು ಆಗದೇ ವಿದ್ಯಾರ್ಥಿಗಳು ಅಸಹಾಯಕರಾಗಿ ನಿಂತಿದ್ದಾರೆ.
ಪರೀಕ್ಷಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿತ್ತು. ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳ ಹರಸಾಹಸ ಪಡಬೇಕಾಯಿತು.