ಕಲಬುರಗಿ:ರಾಜ್ಯ ಸರ್ಕಾರದಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರತ್ಯೇಕ ಧ್ವಜ ಹಾರಾಟಕ್ಕೆ ಯತ್ನ: ಕಲ್ಯಾಣ ಕರ್ನಾಟಕದ ಹೋರಾಟಗಾರರ ಬಂಧನ - ಕಲ್ಯಾಣ ಕರ್ನಾಟಕ ಹೋರಾಟಗಾರ ಮತ್ತು ಅಧ್ಯಕ್ಷ ಎಮ್.ಎಸ್.ಪಾಟೀಲ್ ನರಿಬೋಳ
ರಾಜ್ಯ ಸರ್ಕಾರದಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಜಿಲ್ಲಾ ನ್ಯಾಯಲಯ ಮುಂಭಾಗದ ರಸ್ತೆಯಿಂದ ಪಟೇಲ್ ವೃತ್ತದ ಕಡೆಗೆ ಪ್ರತಿಭಟಿಸಿ ಹೊರಟಿದ್ದ. ಸಮಿತಿಯ ಅಧ್ಯಕ್ಷ ಎಮ್.ಎಸ್.ಪಾಟೀಲ್ ನರಿಬೋಳ ನೇತೃತ್ವದ ಕಾರ್ಯಕರ್ತರನ್ನು ಮಾರ್ಗ ಮಧೈ ತಡೆದ ಪೊಲೀಸರು ಬಂಧಿಸಿದ್ದಾರೆ.
ಸತತವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಾಮಾಜಿಕ, ಆರ್ಥಿಕ, ರಾಜಕೀಯ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಅನ್ಯಾಯವಾಗುತ್ತಿದೆ. 371 ಜೆ ವಿದೇಯಕ ಜಾರಿಯಲ್ಲಿದ್ದರೂ ಸಮರ್ಪಕ ಜಾರಿಗೆ ತರದೆ ಅನ್ಯಾಯ ಮಾಡಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಈ ಭಾಗದ ಪ್ರಗತಿ ಬಗ್ಗೆ ಸಂಪೂರ್ಣ ನಿರ್ಲಕ್ಷವಿದ್ದು, ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ರಾಜ್ಯ ನೀಡುವಂತೆ ಕಾರ್ಯಕರ್ತರು ಆಗ್ರಹಿಸಿ ಬಂಧನಕ್ಕೆ ಒಳಗಾಗಿದ್ದಾರೆ.
TAGGED:
ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು