ಕಲಬುರಗಿ: ಅಫಜಲಪುರ ತಾಲೂಕಿನ ಸುಕ್ಷೇತ್ರ ಘತ್ತರಗಿ ಭಾಗಮ್ಮ ದೇವಸ್ಥಾನದಲ್ಲಿ ಬುಧವಾರ ತಡರಾತ್ರಿ ಕಳ್ಳತನ ನಡೆದಿದ್ದು, 250 ಗ್ರಾಂ ಚಿನ್ನಾಭರಣ ಮತ್ತು ಹುಂಡಿಯಲ್ಲಿನ ಹಣ ಕದ್ದೊಯ್ದಿರುವ ಪ್ರಕರಣ ನಡೆದಿದೆ.
ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ಈ ದೇವಸ್ಥಾನದ ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ, ಕಳ್ಳರು ತಡರಾತ್ರಿ ದೇವಸ್ಥಾನದ ಗರ್ಭಗುಡಿಯ ಬಾಗಿಲು ಮುರಿದು ಒಳನುಗ್ಗಿದ್ದಾರೆ. ದೇವಿ ಮೈಮೇಲಿನ ಚಿನ್ನಾಭರಣ ಮತ್ತು ಹುಂಡಿ ಹಣ ಕದ್ದು ಪರಾರಿಯಾಗಿದ್ದಾರೆ. ಬೆಳಗ್ಗೆ ಪೂಜೆಗೆಂದು ಬಂದ ಅರ್ಚಕರು ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿದೆ.