ಕರ್ನಾಟಕ

karnataka

ETV Bharat / state

ಅಂಬರೀಶ್ ಸ್ಮಾರಕ ನಿರ್ಮಾಣ ವಿಚಾರ: ಸುಮಲತಾ - ಹೆಚ್​ಡಿಕೆ ವಾಕ್ಸರಮಕ್ಕೆ ಸಿಎಂ ಮುಲಾಮು

ಅಂಬರೀಶ್ ಸ್ಮಾರಕಕ್ಕೆ ತಮ್ಮ ಸರ್ಕಾರ ಒಪ್ಪಿಗೆ ನೀಡಿತು ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ತಿರುಗೇಟು ಕೊಟ್ಟಿದ್ದಾರೆ.

ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

By

Published : Jul 10, 2021, 12:58 PM IST

Updated : Jul 10, 2021, 1:03 PM IST

ಕಲಬುರಗಿ: ರೆಬೆಲ್​ ಸ್ಟಾರ್​ ಅಂಬರೀಶ್​ ಅವರ ಸ್ಮಾರಕ ವಿಚಾರ ರಾಜ್ಯಾದ್ಯಂತ ಸದ್ದು ಮಾಡ್ತಿದೆ. ಈ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವೆ ಸಮರ ನಡೆಯುತ್ತಿರುವ ಈ ಹೊತ್ತಿನಲ್ಲೇ ಸಿಎಂ ಯಡಿಯೂರಪ್ಪ ಪರೋಕ್ಷವಾಗಿ ಹೆಚ್​ಡಿಕೆಗೆ ಟಾಂಗ್ ಕೊಟ್ಟಿದ್ದಾರೆ.

ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ನಾವು ಒಪ್ಪಿಗೆ ಕೊಟ್ಟಿರುವ ಬಗ್ಗೆ ಸಮಾಧಾನವಿದೆ: ಸಿಎಂ

ಕಲಬುರಗಿಯಲ್ಲಿ ಮಾತನಾಡಿದ ಸಿಎಂ, ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ನಮ್ಮ ಸರ್ಕಾರ ಒಪ್ಪಿಗೆ ನೀಡಿರುವ ಬಗ್ಗೆ ನನಗೆ ಸಮಾಧಾನವಿದೆ ಎಂದು ಹೇಳುವ ಮೂಲಕ ಹೆಚ್​ಡಿಕೆಗೆ ತಿರುಗೇಟು ನೀಡಿದ್ದಾರೆ. ಮಂಡ್ಯ ರಾಜ್ಯದ ಒಂದು ಭಾಗ. ಅದರ ಅಭಿವೃದ್ಧಿಗೂ ನಾವು ಒತ್ತು ಕೊಡಬೇಕು. ಅದನ್ನು ಬಿಟ್ಟು ಸುಮಲತಾ- ಕುಮಾರಸ್ವಾಮಿ ಈ ರೀತಿ ಕಚ್ಚಾಡುವುದು ಸರಿಯಲ್ಲ. ಎಲ್ಲರೂ ಸಹೋದರರಂತೆ ಬಾಳುವುದನ್ನು ಕಲಿಯಬೇಕು. ಅಲ್ಲಿನ ಅಭಿವೃದ್ಧಿಗೆ ಒಟ್ಟಾಗಿ ದುಡಿಯಬೇಕು ಎಂದು ಸಲಹೆ ಕೊಟ್ಟರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಿಲ್ಲ

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಅಂತಾ ಸಿಎಂ ಬಿ.ಎಸ್. ಯಡಿಯೂರಪ್ಪ​ ಸ್ಪಷ್ಟಪಡಿಸಿದ್ದಾರೆ. ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಅಥವಾ ಸಚಿವರನ್ನು ಕೈ ಬಿಡುವ ಬಗ್ಗೆ ಯಾವುದೇ ಚಿಂತನೆ ನಡೆದಿಲ್ಲ ಎಂದರು.

ಇದನ್ನೂ ಓದಿ:ಮಹಿಳೆಯರು ಅಧಿಕಾರದಲ್ಲಿರೋದನ್ನ ಕೆಲವರು ಸಹಿಸಲ್ಲ: ಟ್ವೀಟ್ ಮೂಲಕ HDKಗೆ ಕುಟುಕಿದ ಸುಮಲತಾ

Last Updated : Jul 10, 2021, 1:03 PM IST

ABOUT THE AUTHOR

...view details