ಕರ್ನಾಟಕ

karnataka

ETV Bharat / state

ಕಲಬುರಗಿಯಲ್ಲಿ ಮೂರು ದಿನ ನಿಷೇಧಾಜ್ಞೆ: ಶಾಂತಿ ಕಾಪಾಡುವಂತೆ ಪೊಲೀಸ್ ಆಯುಕ್ತರ ಮನವಿ - ADGP Alok kumar visits Kalaburagi

ಕಲಬುರಗಿ ನಗರದಲ್ಲಿ ಮೂರು ದಿನಗಳವರೆಗೆ ನಿಷೇಧಾಜ್ಞೆ ಜಾರಿಗೊಳಿಸಿರುವುದರಿಂದ ಯಾವುದೇ ರೀತಿಯ ಬಂದ್ ಹಾಗೂ ಪ್ರತಿಭಟನೆಗೆ ಅವಕಾಶವಿರುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಎಮ್.ಎನ್. ನಾಗರಾಜ್ ತಿಳಿಸಿದ್ದಾರೆ.

Three Day Prohibition in Kalburgi
ಕಲಬುರಗಿಯಲ್ಲಿ ಮೂರು ದಿನ ನಿಷೇಧಾಜ್ಞೆ

By

Published : Dec 20, 2019, 11:51 AM IST

ಕಲಬುರಗಿ:ನಗರದಲ್ಲಿ ಮೂರು ದಿನಗಳವರೆಗೆ ನಿಷೇಧಾಜ್ಞೆ ಜಾರಿಗೊಳಿಸಿರುವುದರಿಂದ ಯಾವುದೇ ರೀತಿಯ ಬಂದ್ ಹಾಗೂ ಪ್ರತಿಭಟನೆಗೆ ಅವಕಾಶವಿರುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಎಮ್.ಎನ್.ನಾಗರಾಜ್ ತಿಳಿಸಿದ್ದಾರೆ.

ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಶಾನ್ಯ ವಲಯ ಐಜಿಪಿ ಮನೀಷ್‌ ಖರ್ಬೀಕರ್‌ ನೇತೃತ್ವದಲ್ಲಿ ಶಾಸಕಿ ಖನಿಜ್ ಫಾತೀಮಾ ಹಾಗೂ ಮುಸ್ಲಿಂ ಸಮುದಾಯದ ಮುಖಂಡರ ಜೊತೆ ಶಾಂತಿ ಸಭೆ ನಡೆಸಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ. ಜೊತೆಗೆ ನಗರದಲ್ಲಿ ಭದ್ರತೆಗಾಗಿ 15 ಕೆ.ಎಸ್.ಆರ್.ಪಿ ತುಕಡಿಗಳನ್ನು ನಿಯೋಜಿಸಲಾಗಿದೆ ಮತ್ತು 13 ಚೆಕ್ ಪೋಸ್ಟ್‌ ಗಳನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಎಡಿಜಿಪಿ ಅಲೋಕ್‌ಕುಮಾರ್‌ ಕಲಬುರಗಿಗೆ:

ಕಲಬುರಗಿ ಭದ್ರತಾ ಉಸ್ತುವಾರಿ ವಹಿಸಿಕೊಂಡಿರುವ ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್‌ ಕುಮಾರ್‌ ಭದ್ರತೆ ಪರಿಶೀಲನೆಗೆ ಕಲಬುರಗಿಗೆ ಆಗಮಿಸಲಿದ್ದು, ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.

ABOUT THE AUTHOR

...view details