ಕಲಬುರಗಿ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ನಗರದಲ್ಲಿ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಫೆ.5ರಿಂದ ಮೂರು ದಿನ ಕಲಬುರಗಿ ಶಾಲಾ-ಕಾಲೇಜುಗಳಿಗೆ ರಜೆ: ಡಿಸಿ - Latest News for D,C Sharath
ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಫೆಬ್ರವರಿ 5 ರಿಂದ ಮೂರು ದಿನಗಳ ಕಾಲ ಸಮ್ಮೇಳನ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಮ್ಮೇಳನ ನಡೆಯುವ ಫೆಬ್ರವರಿ 5, 6 ಹಾಗೂ 7 ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡುತ್ತಿರುವುದಾಗಿ ಜಿಲ್ಲಾಧಿಕಾರಿ ಶರತ್ ಬಿ. ಮಾಹಿತಿ ನೀಡಿದ್ದಾರೆ

ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಫೆಬ್ರವರಿ 5 ರಿಂದ ಮೂರು ದಿನಗಳ ಕಾಲ ಸಮ್ಮೇಳನ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಮ್ಮೇಳನ ನಡೆಯುವ ಫೆ 5, 6 ಹಾಗೂ 7 ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡುತ್ತಿರುವುದಾಗಿ ಜಿಲ್ಲಾಧಿಕಾರಿ ಶರತ್ ಬಿ. ಮಾಹಿತಿ ನೀಡಿದ್ದಾರೆ.
ಹಲವಾರು ಶಾಲಾ ಬಸ್ಗಳನ್ನು ಸಾರಿಗೆ ಸೌಕರ್ಯಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಜೊತೆಗೆ ಶಾಲಾ-ಕೊಠಡಿಗಳನ್ನು ಸಮ್ಮೇಳನಕ್ಕೆ ಬರುವ ಪ್ರತಿನಿಧಿಗಳ ವಸತಿ ವ್ಯವಸ್ಥೆಗಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಶಾಲಾ, ಕಾಲೇಜು ಮಕ್ಕಳಿಗೆ ರಜೆ ಘೋಷಿಸಲಾಗುತ್ತಿದೆ. ಶಿಕ್ಷಕರು, ಉಪನ್ಯಾಸಕರು, ಸಮ್ಮೇಳನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.