ಕರ್ನಾಟಕ

karnataka

ETV Bharat / state

ಗೋವುಗಳನ್ನ ರಕ್ಷಿಸಿದ್ದೇ ತಪ್ಪಾಯ್ತಾ.. ಪ್ರತಿಭಟನೆ ವೇಳೆ ಮತ್ತೆ ಕಲ್ಲು ತೂರಾಟ - ಅಕ್ರಮ ಗೋ ಸಾಗಣೆ

ಭಾನುವಾರ ಕೆಲ ಯುವಕರು ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿ ಪೊಲೀಸರಿಗೆೊಪ್ಪಿಸಿದ್ದರು. ಇದರಿಂದ ಕುಪಿತಗೊಂಡ ಮತ್ತೊಂದು ಗುಂಪಿನ ಜನ ಠಾಣೆ ಎದುರೇ ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದರು.

ಪ್ರತಿಭಟನೆ ವೇಳೆ ಮತ್ತೇ ಕಲ್ಲು ತೂರಾಟ

By

Published : Aug 13, 2019, 9:11 AM IST

Updated : Aug 13, 2019, 12:42 PM IST

ಕಲಬುರಗಿ: ಚಿತ್ತಾಪುರ ಪಟ್ಟಣದಲ್ಲಿನ ಕಲ್ಲು ತೂರಾಟ ಪ್ರಕರಣವನ್ನು ವಿರೋಧಿಸಿ ನಿನ್ನೆ ರಾತ್ರಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದು,ಆ ವೇಳೆ ಮತ್ತೆ ಕಲ್ಲು ತೂರಾಟ ನಡೆದಿದೆ ಎಂದು ತಿಳಿದು ಬಂದಿದೆ.

ಭಾನುವಾರ ಕೆಲ ಯುವಕರು ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದರು. ಇದರಿಂದ ಕುಪಿತಗೊಂಡು ಮತ್ತೊಂದು ಗುಂಪು ಠಾಣೆ ಎದುರೇ ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದರು.

ಪೊಲೀಸರ ಮೇಲೆ ಕಲ್ಲು ತೂರಾಟ ಪ್ರಕರಣ ಖಂಡಿಸಿ ಹಾಗೂ ಕಲ್ಲು ತೂರಿದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ನಿನ್ನೆ ರಾತ್ರಿ ಹಲವು ಯುವಕರು ಚಿತ್ತಾಪುರ ಪಟ್ಟಣದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆಯ ಬೆನ್ನ ಹಿಂದೆಯೇ ಮತ್ತೊಂದು ಗುಂಪು ತಡರಾತ್ರಿ ಕಲ್ಲು ತೂರಾಟ ನಡೆಸಿದೆ ಎಂದು ತಿಳಿದು ಬಂದಿದೆ.

ಪ್ರತಿಭಟನೆ ವೇಳೆ ಮತ್ತೆ ಕಲ್ಲು ತೂರಾಟ

ಚಿತ್ತಾಪುರ ಪಟ್ಟಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸದ್ಯ ಚಿತ್ತಾಪುರ ಪಟ್ಟಣದಲ್ಲಿ ಬೂದಿ ಮುಚ್ಚಿದ ಕೆಂಡದಂತ ಪರಿಸ್ಥಿತಿ ನಿರ್ಮಾಣವಾಗಿದೆ.

Last Updated : Aug 13, 2019, 12:42 PM IST

ABOUT THE AUTHOR

...view details