ಕಲಬುರಗಿ:ಆಳಂದ ಶಾಸಕ ಸುಭಾಷ್ ಗುತ್ತೇದಾರರಿಗೆ ಸಚಿವ ಸ್ಥಾನ ನೀಡುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.
ಸುಭಾಷ್ ಗುತ್ತೇದಾರರಿಗೆ ಸಚಿವ ಸ್ಥಾನ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹ.. - ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ಸೈಯದ್ ಮಸ್ತಾನ್ ಪಟೇಲ್
ಆಳಂದ ಶಾಸಕ ಸುಭಾಷ್ ಗುತ್ತೇದಾರರಿಗೆ ಸಚಿವ ಸ್ಥಾನ ನೀಡುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಶಾಸಕ ಸುಭಾಷ್ ಗುತ್ತೇದಾರ
ಕಲಬುರಗಿಯಲ್ಲಿ ಮಾತನಾಡಿದ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ಸೈಯದ್ ಮಸ್ತಾನ್ ಪಟೇಲ್, ಸುಭಾಷ್ ಗುತ್ತೇದಾರ ಅವರು ಆಳಂದ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಿಂದುಳಿದ ವರ್ಗದ ನಾಯಕರಾಗಿರುವ ಗುತ್ತೇದಾರ, ಜಿಲ್ಲೆಯಲ್ಲಿ ಅತ್ಯಂತ ಹಿರಿಯ ಶಾಸಕರೆನಿಸಿ ಕೊಂಡಿದ್ದಾರೆ. ಹೀಗಾಗಿ ಅವರ ಹಿರಿತನವನ್ನು ಪರಿಗಣಿಸಬೇಕು. ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಿ ಸುಭಾಷ್ ಗುತ್ತೇದಾರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಬಿಜೆಪಿ ರಾಜ್ಯ ಹಾಗೂ ರಾಷ್ಟ್ರ ನಾಯಕರನ್ನು ಒತ್ತಾಯಿಸಿದ್ದಾರೆ.