ಕಲಬುರಗಿ: ಅಖಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇವತ್ತು ಕೊನೆಯ ದಿನ. ಹಾಗಾಗಿ ಇಂದು ವಿವಿಧ ಗೋಷ್ಠಿಗಳು, ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ಸೇರಿ ಹಲವು ಕಾರ್ಯಕ್ರಮಗಳು ನಡೆಯಲಿವೆ. ಪ್ರಮುಖ ವೇದಿಕೆಯಲ್ಲಿ ಬೆಳಗ್ಗೆ 9:30ರಿಂದ ಚಲನಚಿತ್ರ ಮತ್ತು ಕನ್ನಡ ಸಾಹಿತ್ಯ ಕುರಿತಾಗಿ ಗೋಷ್ಠಿಗಳು ನಡೆದವು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ ಇದರ ಅಧ್ಯಕ್ಷತೆ ವಹಿಸಿದ್ದರು.
85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ.. - ಕಲಬುರಗಿಯಲ್ಲಿ 85ನೇ ಕನ್ನಡ ಸಾಹಿತ್ಯ ಸಮ್ಮೇಳನ
ಸಂಜೆ 4:15ಕ್ಕೆ ಮುಖ್ಯವೇದಿಕೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್‌ಕುಮಾರ್ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ನಡೆದ ಕವಿಗೋಷ್ಠಿಯಲ್ಲಿ ಡಾ. ಬಸವರಾಜ ಸಬರದ ಅಧ್ಯಕ್ಷತೆ ವಹಿಸಿದ್ದರು. 12:30ಕ್ಕೆ ಮಾಧ್ಯಮ ಸವಾಲುಗಳು ಕುರಿತಾಗಿ ಗೋಷ್ಠಿ ನಡೀತು. ಮಧ್ಯಾಹ್ನ 2 ಗಂಟೆಗೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ನಡೆಯಲಿದೆ. 3:30ಕ್ಕೆ ಬಹಿರಂಗ ಅಧಿವೇಶನ ನಡೆಯಲಿದೆ. ಸಂಜೆ 4:15ಕ್ಕೆ ಮುಖ್ಯವೇದಿಕೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್‌ಕುಮಾರ್ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸಮ್ಮೇಳನದ ಅಧ್ಯಕ್ಷರಾದ ಡಾ. ಹೆಚ್ ಎಸ್ ವೆಂಕಟೇಶಮೂರ್ತಿ ಸಮ್ಮೇಳನಾಧ್ಯಕ್ಷರ ನುಡಿ ನುಡಿಯಲಿದ್ದಾರೆ. ಸಮನಾಂತರ ಎರಡು ವೇದಿಕೆಗಳಲ್ಲಿಯೂ ಕವಿಗೋಷ್ಠಿಗಳು ನಡೆಯಲಿವೆ. ಬಳಿಕ ಖ್ಯಾತ ಹಿನ್ನೆಲೆ ಗಾಯಕ ವಿಜಯಪ್ರಕಾಶ್ ಸೇರಿ ವಿವಿಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.