ಕರ್ನಾಟಕ

karnataka

ETV Bharat / state

ಧಾರಾಕಾರ ಮಳೆ ; ಕಲಬುರಗಿ ಜಿಲ್ಲೆಯ ಹಲವೆಡೆ ರಸ್ತೆಗಳು ಜಲಾವೃತ

ಮಳೆ ನೀರಿನಿಂದ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸವಾರರು ಪರದಾಡುವಂತಾಗಿದೆ. ರಸ್ತೆ ಬದಿಯ ಅಂಗಡಿಗಳಿಗೆ ನೀರು ನುಗ್ಗಿ ಸಂಪೂರ್ಣ ಹಾನಿಯಾಗಿದೆ. ವಾಹನಗಳು ಮುಳುಗುವ ಹಂತಕ್ಕೆ ನೀರಿನ ಮಟ್ಟ ಏರುತ್ತಿದೆ. ಇನ್ನು ಜಿಲ್ಲೆಯ ಹಲವೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆಲ ಪ್ರದೇಶಗಳಲ್ಲಿ ಜನ ಜೀವನ ಅಸ್ಥವ್ಯಸ್ತಗೊಂಡಿದೆ..

kalaburagi-district-underwater

By

Published : Jul 8, 2020, 10:04 PM IST

ಕಲಬುರಗಿ :ಜಿಲ್ಲೆಯ ಹಲವೆಡೆ ಇಂದು ವರುಣ ಅಬ್ಬರಿಸಿದ್ದಾನೆ. ಆಳಂದ ತಾಲೂಕಿನ ನರೋಣಾ ಗ್ರಾಮದ ರಸ್ತೆಗಳು ಸಂಪೂರ್ಣ ಜಲಾವೃತಗೊಂಡು ಗ್ರಾಮ ನಡುಗಡ್ಡೆಯಂತಾಗಿದೆ.

ಸುಮಾರು ಒಂದೂವರೆ ಗಂಟೆ ಧಾರಾಕಾರ ಮಳೆಯಾಗಿದ್ದು, ರಸ್ತೆ ಮೇಲೆ ಮಳೆ ನೀರು ರಭಸದಿಂದ ಹರಿಯುತ್ತಿದೆ. ಮಳೆ ನೀರಿನಿಂದ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸವಾರರು ಪರದಾಡುವಂತಾಗಿದೆ.

ರಸ್ತೆ ಬದಿಯ ಅಂಗಡಿಗಳಿಗೆ ನೀರು ನುಗ್ಗಿ ಸಂಪೂರ್ಣ ಹಾನಿಯಾಗಿದೆ. ವಾಹನಗಳು ಮುಳುಗುವ ಹಂತಕ್ಕೆ ನೀರಿನ ಮಟ್ಟ ಏರುತ್ತಿದೆ. ಜಿಲ್ಲೆಯ ಹಲವೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆಲ ಪ್ರದೇಶಗಳಲ್ಲಿ ಜನ ಜೀವನ ಅಸ್ಥವ್ಯಸ್ತಗೊಂಡಿದೆ.

ABOUT THE AUTHOR

...view details