ಕಲಬುರಗಿ : ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಶಹಬಾದ್ ಸಮೀಪದ ಮರ್ತೂರು ಗ್ರಾಮದಲ್ಲಿ ನಡೆದಿದೆ.
ಶಹಬಾದ್ ಬಳಿ ಟ್ರ್ಯಾಕ್ಟರ್ ಪಲ್ಟಿ: ಇಬ್ಬರ ಸಾವು
ಕಲಬುರಗಿ ಜಿಲ್ಲೆಯ ಶಹಬಾದ್ ಪಟ್ಟಣದ ಬಳಿಯ ಮರ್ತೂರು ಗ್ರಾಮದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.
ಇಬ್ಬರು ವ್ಯಕ್ತಿಗಳು ಸಾವು
ದೇವರಾಜ್ (26) ಮತ್ತು ಪ್ರಭು ಪೂಜಾರಿ (32) ಎಂಬುವವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಶಹಬಾದ್ ಸ್ಟೇಷನ್ನಿಂದ ಮರ್ತೂರು ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.