ಕಲಬುರಗಿ: ಸಂಚಾರಿ ಪೊಲೀಸರಿಂದ ಸಾರ್ವಜನಿಕರಿಗೆ ಉಚಿತ ಮಾಸ್ಕ್ ವಿತರಿಸುವ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಉಚಿತ ಮಾಸ್ಕ್ ವಿತರಿಸಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ ಸಂಚಾರಿ ಪೊಲೀಸರು - ಉಚಿತ ಮಾಸ್ಕ್ ವಿತರಣೆ ಕಲಬುರಗಿ
ಕಲಬುರಗಿಯಲ್ಲಿ ಇಬ್ಬರು ಸಂಚಾರಿ ಪೊಲೀಸರು ಸಾರ್ವಜನಿಕರಿಗೆ ಉಚಿತ ಮಾಸ್ಕ್ ವಿತರಿಸುವ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದರು.

ಉಚಿತ ಮಾಸ್ಕ್ ವಿತರಣೆ
ನಗರದ ಸರ್ದಾರ್ ಪಟೇಲ್ ವೃತ್ತದಲ್ಲಿ ಸಂಚಾರಿ ಪೊಲೀಸ್ ಠಾಣೆ 1ರ ಎಎಸ್ಐ ಶ್ರೀಮಂತ ಹಾಗೂ ಹೆಡ್ ಕಾನ್ಸ್ಟೇಬಲ್ ತಾರಾಸಿಂಗ್ ಚವ್ಹಾಣ ತಮ್ಮ ಸ್ವಂತ ಹಣದಲ್ಲಿ ಸಾರ್ವಜನಿಕರಿಗೆ, ಬೈಕ್ ಸವಾರರಿಗೆ ಹಾಗೂ ಆಟೋ ಚಾಲಕರಿಗೆ ಸ್ಯಾನಿಟೈಸರ್ನಿಂದ ಹ್ಯಾಂಡ್ ವಾಶ್ ಮಾಡಿಸಿ ಅವರಿಗೆ ಮಾಸ್ಕ್ ನೀಡುವುದರ ಮೂಲಕ ಕೊರೊನಾ ಕುರಿತು ಜಾಗೃತಿ ಮೂಡಿಸಿದರು.
ಸಂಚಾರಿ ಪೊಲೀಸರಿಂದ ಉಚಿತ ಮಾಸ್ಕ್ ವಿತರಣೆ
ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಜನ ಮಾಸ್ಕ್ ಇಲ್ಲದೆ ತಿರುಗಾಡುತ್ತಿರುವುದನ್ನು ಕಂಡ ಇಬ್ಬರು ಸಂಚಾರಿ ಪೊಲೀಸರು ಸ್ವಯಂ ಪ್ರೇರಿತರಾಗಿ ಮಾಸ್ಕ್ ನೀಡಿ ಜನರಲ್ಲಿ ಜಾಗೃತಿ ಮೂಡಿಸಿದರು.