ಕರ್ನಾಟಕ

karnataka

ರೈಲು​​ ರೋಖೋ ಚಳವಳಿ ಬೆಂಬಲಿಸಿ ಕಲಬುರಗಿಯಲ್ಲಿ ಪ್ರತಿಭಟನೆ

By

Published : Feb 18, 2021, 5:00 PM IST

ಎಪಿಎಂಸಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ವಿದ್ಯುತ್ ಕಾಯ್ದೆ ವಾಪಸ್​​​ಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾದಿಂದ ರೈಲು ರೋಖೋ ಹೋರಾಟ ಬೆಂಬಲಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

rokho-movement-protest-in-kalaburagi
ಕಲಬುರಗಿಯಲ್ಲಿ ಪ್ರತಿಭಟನೆ

ಕಲಬುರಗಿ:ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕರೆ ನೀಡಲಾದ ದೇಶವ್ಯಾಪ್ತಿ ರೈಲು ರೋಖೋ ಚಳವಳಿ ಬೆಂಬಲಿಸಿ ಕಲಬುರಗಿಯಲ್ಲಿ ರೈಲು ತಡೆಯಲು ಯತ್ನಿಸಿದ 30ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಕಲಬುರಗಿಯಲ್ಲಿ ಪ್ರತಿಭಟನೆ

ಓದಿ: ಬಿಹಾರ ಚುನಾವಣೆಯಲ್ಲಿ ಆರ್​ಜೆಡಿ - ಕಾಂಗ್ರೆಸ್​​ಗೆ ವಿಜಯೇಂದ್ರ ಹಣ: ಯತ್ನಾಳ್​​

ಎಪಿಎಂಸಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ವಿದ್ಯುತ್ ಕಾಯ್ದೆ ವಾಪಸ್​​​ಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾದಿಂದ ರೈಲು ರೋಖೋ ಹೋರಾಟ ಬೆಂಬಲಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಲಬುರಗಿ ರೈಲ್ವೆ ನಿಲ್ದಾಣದ ಎದುರು ಎರಡು ಗಂಟೆ ಪ್ರತಿಭಟನೆ ನಡೆಸಿದ ಬಳಿಕ, ರೈಲ್ವೆ ನಿಲ್ದಾಣದ ಒಳಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬ್ಯಾರಿಕೇಡ್ ಬಳಿ ತಡೆದರು. ನಂತರ ರೊಚ್ಚಿಗೆದ್ದ ಹೋರಾಟಗಾರರು ರೈಲು ರೋಖೋಗೆ ಯತ್ನಿಸಿದರು. ಈ ವೇಳೆ ಮಾಜಿ ಶಾಸಕ ಬಿ.ಆರ್.ಪಾಟೀಲ್ ಸೇರಿದಂತೆ 30ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ABOUT THE AUTHOR

...view details