ಕಲಬುರಗಿ :ಧಲೈನ್ ಚವ್ಮನ್ ಪೊಲೀಸ್ ಠಾಣೆ ವ್ಯಾಪ್ತಿಯ ಆರ್ಸಿ ನಾಥ್ ಬಾರ್ಡ್ ಔಟ್ಪೋಸ್ಟ್ನಲ್ಲಿ ಗಸ್ತು ತಿರುಗುತ್ತಿದ್ದ ಯೋಧರ ಮೇಲೆ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ ಗ್ರಾಮದ ಬಿಎಸ್‌ಎಫ್ ಯೋಧ ಹುತಾತ್ಮರಾಗಿದ್ದಾರೆ.
ಗಡಿಯಲ್ಲಿ ಉಗ್ರರೊಂದಿಗೆ ಗುಂಡಿನ ಕಾಳಗ : ಕಲಬುರ್ಗಿಯ ಯೋಧ ಹುತಾತ್ಮ
ತ್ರೀಪುರಾ ರಾಜ್ಯದ ಭಾರತ-ಬಾಂಗ್ಲಾ ಗಡಿಯಲ್ಲಿ ನಡೆದ ಉಗ್ರರೊಂದಿಗಿನ ಕಾಳಗದಲ್ಲಿ ಕಲಬುರಗಿ ಜಿಲ್ಲೆಯ ವೀರ ಯೋಧ ರಾಜ್ಕುಮಾರ್ ಅವರು ಹುತಾತ್ಮರಾಗಿದ್ದಾರೆ. ಗುರುವಾರದಂದು ಯೋಧನ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ..
ಯೋಧ ರಾಜಕುಮಾರ್
ತ್ರಿಪುರದ ಧಲೈ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಗೆ ರಾಜ್ಯ ಓರ್ವ ಸೈನಿಕ ಸೇರಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಯೋಧ ರಾಜಕುಮಾರ್ ಎಂ. ಮಾವಿನ್ ಸಾವನ್ನಪ್ಪಿದ ಸುದ್ದಿ ಕೇಳಿ ಚಿಂಚನೂರು ಗ್ರಾಮಸ್ಥರು ದಿಗ್ಬ್ರಾಂತರಾಗಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮಾಹಿತಿ ಪ್ರಕಾರ ಗುರುವಾರದಂದು ಯೋಧನ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.