ಕರ್ನಾಟಕ

karnataka

ETV Bharat / state

ಕಲಬುರಗಿಯಲ್ಲಿ ಮತ್ತೆ ಇಬ್ಬರಲ್ಲಿ ಕೊರೊನಾ ಪತ್ತೆ... - ಪಿ.425 ಜೊತೆ ಸೆಕೆಂಡರಿ ಸಂಪರ್ಕದಲ್ಲಿದ್ದ 7 ವರ್ಷದ ಬಾಲಕ

ಕಲಬುರಗಿಯಲ್ಲಿ ಪಿ. 422 ಸಂಪರ್ಕದಲ್ಲಿದ್ದ 65 ವರ್ಷದ ಮಹಿಳೆಗೆ ಹಾಗೂ ಪಿ.425 ಜೊತೆ ಸೆಕೆಂಡರಿ ಸಂಪರ್ಕದಲ್ಲಿದ್ದ 7 ವರ್ಷದ ಬಾಲಕನಿಗೆ ಕೊರೊನಾ ಸೋಂಕು ಇರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ.

two corona cases in kalburgi
ಕಲಬುರಗಿಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಪತ್ತೆ...

By

Published : Apr 26, 2020, 7:05 PM IST

ಕಲಬುರಗಿ: ಏಳು ವರ್ಷದ ಬಾಲಕ ಸೇರಿ ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಪಿ. 422 ಸಂಪರ್ಕದಲ್ಲಿದ್ದ 65 ವರ್ಷದ ಮಹಿಳೆಗೆ ಹಾಗೂ ಪಿ.425 ಜೊತೆ ಸೆಕೆಂಡರಿ ಸಂಪರ್ಕದಲ್ಲಿದ್ದ 7 ವರ್ಷದ ಬಾಲಕನಿಗೆ ಕೊರೊನಾ ಸೋಂಕು ಇರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ.

ಸೋಂಕಿತರನ್ನು ಇಎಸ್ ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38 ಕ್ಕೆ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ಒಂದೂ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರಲಿಲ್ಲ, ಹೀಗಾಗಿ ಜಿಲ್ಲೆಯ ಜನರು ನೆಮ್ಮದಿಯ ಉಸಿರು ಬಿಟ್ಟಿದ್ದರು. ಇದೀಗ ಮತ್ತೆ ಎರಡು ಕೊರೊನಾ ಕೇಸ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಶುರುವಾಗಿದೆ.

ABOUT THE AUTHOR

...view details