ಕಲಬುರಗಿ: ದಿಬ್ಬಣದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಕಡಣಿ ಗ್ರಾಮದ ತಾಂಡಾಬಳಿ ನಡೆದಿದೆ. ಶಿವಕುಮಾರ್ ಹಾಗೂ ಇನ್ನೋರ್ವ ಮಹಿಳೆ ಮೃತಪಟ್ಟಿದ್ದಾರೆ. ಇವರೆಲ್ಲರೂ ಕಲಬುರಗಿ ತಾಲೂಕಿನ ಹಾವನೂರ್ ಗ್ರಾಮದ ನಿವಾಸಿಗಳಾಗಿದ್ದು, ಆಳಂದ ತಾಲೂಕಿನ ರುದ್ರವಾಡಿ ಗ್ರಾಮದಲ್ಲಿ ಮದುವೆ ಮುಗಿಸಿಕೊಂಡು ವಾಪಸಾಗುವಾಗ ದುರ್ಘಟನೆ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಸ್ ಉರುಳಿದ್ದು ಐದು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಅವರೆಲ್ಲರಿಗೂ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಸ್ಲ್ಲಿದ್ದ ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಅವರಿಗೆ ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ಸಿನ ಅಡಿ ಸಿಲುಕಿದವರನ್ನು ಗ್ರಾಮಸ್ಥರ ಸಹಾಯದಿಂದ ರಕ್ಷಣೆ ಮಾಡಲಾಗಿದೆ. ಜೆಸಿಬಿ ಮೂಲಕ ಪಲ್ಟಿಯಾಗಿರುವ ಬಸ್ಅನ್ನು ಮೇಲೆತ್ತಲಾಗಿದೆ.