ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದ್ದು, ಜಿಲ್ಲೆಯಲ್ಲಿ ನಿನ್ನೆ ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದಾರೆ.
ಕಲಬುರಗಿ: ಕೊರೊನಾಗೆ ಮತ್ತಿಬ್ಬರು ಬಲಿ... ಸಾವಿನ ಸಂಖ್ಯೆ 161ಕ್ಕೆ ಏರಿಕೆ - Kalaburagi Two deaths from corona infection News
ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಮರಣ ಮೃದಂಗ ಬಾರಿಸುತ್ತಿದೆ. ಓರ್ವ ಮಹಿಳೆ ಹಾಗೂ ಓರ್ವ ಪುರುಷ ಬಲಿಯಾಗಿದ್ದಾರೆ. 60 ವರ್ಷದ ಮಹಿಳೆ ಹಾಗೂ 48 ವರ್ಷದ ಪುರುಷ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ 161ಕ್ಕೆ ಏರಿಕೆಯಾಗಿದೆ.
ಕೊರೊನಾಗೆ ಮತ್ತಿಬ್ಬರು ಬಲಿ
ಓರ್ವ ಮಹಿಳೆ(60) ಹಾಗೂ ಓರ್ವ ಪುರುಷ(48) ಸಾವನ್ನಪ್ಪಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ 161ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ನಿನ್ನೆ 189 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 8,540 ಗೆ ಏರಿಕೆಯಾಗಿದೆ. ಶನಿವಾರ 219 ಜನ ಸೋಂಕಿತರು ಡಿಸ್ಚಾರ್ಜ್ ಆಗಿದ್ದು, ಡಿಸ್ಚಾರ್ಜ್ ಆದವರ ಸಂಖ್ಯೆ 6,369 ಗೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2010 ಸಕ್ರಿಯ ಪ್ರಕರಣಗಳಿವೆ.