ಕಲಬುರಗಿ:ವಿದ್ಯುತ್ ತಂತಿ ತಗುಲಿ ಇಬ್ಬರು ದುರ್ಮರಣ ಹೊಂದಿರುವ ಘಟನೆ ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದಲ್ಲಿ ನಡೆದಿದೆ.
ಕಲಬುರಗಿ: ವಿದ್ಯುತ್ ತಂತಿ ತಗುಲಿ ಇಬ್ಬರು ಸಾವು - ಕಲಬುರಗಿ ಸುದ್ದಿ
ಜಮೀನಿಗೆ ಹೋದಾಗ ವಿದ್ಯುತ್ ತಂತಿ ತಗುಲಿ ಇಬ್ಬರು ದುರ್ಮರಣ ಹೊಂದಿರುವ ಘಟನೆ ನಡೆದಿದೆ.
two died due to electric shock
ಸಿದ್ಧರಾಮ ಪೂಜಾರಿ (58) ಹಾಗೂ ಅಮೃತರಾಯ ಚಿಂಚೋಳಿ (55) ಮೃತರು. ಕುಲಾಲಿ ರಸ್ತೆಯಲ್ಲಿರುವ ಸಿದ್ಧರಾಮ ಪೂಜಾರಿ ಎಂಬವರಿಗೆ ಸೇರಿದ ಜಮೀನಿಗೆ ಹೋದಾಗ ಈ ಅವಘಡ ಸಂಭವಿಸಿದೆ.
ಜಮೀನಿನ ಬದಿಯ ವಿದ್ಯುತ್ ತಂತಿ ಬೇಲಿ ತಗುಲಿ ಇಬ್ಬರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪಿಎಸ್ಐ ಸುರೇಶ್ ಕುಮಾರ್ ಚೌವ್ಹಾಣ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಈ ಕುರಿತು ನಿಂಬರ್ಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.