ಕಲಬುರಗಿ: ಬೆಂಗಳೂರಿನಿಂದ ಬಂದಿದ್ದ ವ್ಯಕ್ತಿ ಹಾಗೂ 5 ವರ್ಷದ ಮಗು ಸೇರಿ ಜಿಲ್ಲೆಯಲ್ಲಿ ಮತ್ತೆ ಎರಡು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
32 ವರ್ಷದ ವ್ಯಕ್ತಿ ಬೆಂಗಳೂರಿನಿಂದ ಬಂದಿದ್ದು, ಬರುವಾಗಲೇ ಸೋಂಕು ತಗುಲಿರುವ ಶಂಕೆ ಇದೆ. ಇನ್ನೋರ್ವ 5 ವರ್ಷದ ಗಂಡು ಮಗುವಿಗೆ ಕೊರೊನಾ ಸೋಂಕು ತಗುಲಿರುವದು ಪತ್ತೆಯಾಗಿದೆ. ಆದ್ರೆ ಮಗುವಿನ ಟ್ರಾವೆಲ್ ಹಿಸ್ಟರಿ ಇನ್ನೂ ತಿಳಿದುಬಂದಿಲ್ಲ. ಇಂದು ಬೆಳಗ್ಗೆ 23 ವರ್ಷದ ಯುವತಿಗೆ ಕೊರೊನಾ ದೃಢಪಟ್ಟಿತ್ತು.
ಕಲಬುರಗಿಯಲ್ಲಿ ಮತ್ತೆರಡು ಕೊರೊನಾ ಪ್ರಕರಣ ಪತ್ತೆ: ಜಿಲ್ಲೆಯಲ್ಲಿ 20ಕ್ಕೇರಿದ ಸೋಂಕಿತರ ಸಂಖ್ಯೆ - ಕಲಬುರಗಿಯಲ್ಲಿ ಮತ್ತೆರೆಡು ಕೊರೊನಾ ಪಾಸಿಟಿವ್ ಪ್ರಕರಣ
ಕಲಬುರಗಿಯಲ್ಲಿ ಮತ್ತೆರಡು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಕಲಬುರಗಿಯಲ್ಲಿ ಮತ್ತೆರೆಡು ಕೊರೊನಾ ಪಾಸಿಟಿವ್ ಪ್ರಕರಣ
ಒಟ್ಟಾರೆ ಜಿಲ್ಲೆಯಲ್ಲಿ ಇಲ್ಲಿವರೆಗೆ ಕೊರೊನಾ ಸೋಂಕಿತರ ಸಂಖ್ಯೆ 20ಕ್ಕೆ ಏರಿದೆ. ಇದರಲ್ಲಿ ಮೂವರು ಸಾವನ್ನಪ್ಪಿದ್ದು, ಮೂವರು ಗುಣಮುಖರಾಗಿ ಮನೆಯಲ್ಲಿದ್ದಾರೆ. ಉಳಿದ 14 ಸೋಂಕಿತರಿಗೆ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.