ಕಲಬುರಗಿ: ಕೊರೊನಾ ಸೋಂಕಿನಿಂದ ನಗರದಲ್ಲಿ ಮತ್ತಿಬ್ಬರು ವೃದ್ಧರು ಮೃತಪಟ್ಟಿದ್ದಾರೆ. ಇದರಿಂದ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
ಕಲಬುರಗಿಯಲ್ಲಿ ಕೊರೊನಾಗೆ ಮತ್ತಿಬ್ಬರು ಬಲಿ - Kalburgi corona
ಕೊರೊನಾಗೆ ಕಲಬುರಗಿಯಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 36ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.
ತೀವ್ರ ಉಸಿರಾಟದ ತೊಂದರೆ, ಜ್ವರ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ನಗರದ ಸವೇರಾ ಕಾಲೋನಿಯ 84 ವರ್ಷದ ವೃದ್ಧ (P-26644) ಜು. 4ರಂದು ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಜು. 7ರಂದು ಕೊರೊನಾ ಸೋಂಕು ತಗುಲಿರುವುದು ಖಾತ್ರಿಯಾಗಿ ಜು. 10ರಂದು ಮೃತಪಟ್ಟಿದ್ದಾರೆ. ತೀವ್ರ ಉಸಿರಾಟದ ತೊಂದರೆ, ಅಧಿಕ ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದ ನಗರದ ಎಂ.ಎಸ್.ಕೆ.ಮಿಲ್ ಪ್ರದೇಶದ 80 ವರ್ಷದ ವೃದ್ಧ (P-26648) ಜು. 4ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜು. 7ರಂದು ಕೊರೊನಾ ತಗುಲಿದ್ದು ದೃಢವಾಗಿದ್ದು, ಜು. 10ರಂದು ನಿಧನ ಹೊಂದಿದ್ದಾರೆ.
ಜಿಲ್ಲೆಯಲ್ಲಿ ನಿನ್ನೆ 65 ಜನರಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ 8 ಮಕ್ಕಳು, 21 ಮಹಿಳೆಯರು ಎಲ್ಐಎಲ್ ಲಕ್ಷಣವುಳ್ಳ 27 ಪ್ರಕರಣಗಳು ದಾಖಲಾಗಿವೆ. ಸದ್ಯ ಜಿಲ್ಲೆಯಲ್ಲಿ 528 ಸಕ್ರಿಯ ಪ್ರಕರಣಗಳಿವೆ.